Header Ads
Breaking News

ನಗರ ಪ್ರದೇಶದಲ್ಲಿ ರಿಕ್ಷಾ ಚಾಲಕರಿಂದ ಹೆಚ್ಚುವರಿ ಹಣವಸೂಲಿ : ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು

 ನಗರ ಪ್ರದೇಶದಲ್ಲಿ ರಿಕ್ಷಾ ಚಾಲಕರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ದೂರು ಕೇಳಿಬಂತು. ಈ ಬಗ್ಗೆ ತಕ್ಷಣವೇ ಕ್ರಮ ಜರುಗಿಸಲಾಗುವುದು ಅಂತಾ ಕಾನೂನು ಮತ್ತು ಸುವ್ಯಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ಹೇಳಿದ್ರು. ಮಂಗಳೂರಿನ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ಸಾರ್ವಜನಿಕರ ದೂರಿಗೆ ಪ್ರತಿಕ್ರಿಯಿಸಿ, ಮಾತನಾಡಿದ್ರು. ಮುಂದಿನ ದಿನಗಳಲ್ಲಿ ರಿಕ್ಷಾ ಪಾರ್ಕ್‌ನಲ್ಲಿ ದರ ಕುರಿತು ಬೋರ್ಡ್‌ಗಳನ್ನು ಅಳವಡಿಸಿಕೊಳ್ಳಬೇಕು. ಇದರ ಜೊತೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮೊಬೈಲ್ ನಂಬರ್ ಅನ್ನು ನಮೂದಿಸಲು ಸೂಚನೆ ನೀಡಿದರು. ಇನ್ನು ಬಲ್ಮಠದಲ್ಲಿ 4ವೀಲ್ಹರ್ ವಾಹನಗಳಿಗೆ ನಿಗದಿಪಡಿಸಿರುವ ಜಾಗದಲ್ಲಿ, 2 ವೀಲ್ಹರ್ ವಾಹನಗಳನ್ನು ನಿಲ್ಲಿಸಿರುವುದರಿಂದ ತೊಂದರೆ ಆಗುತ್ತೆ ಎಂದು ಸಾರ್ವಜನಿಕರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಹನುಮಂತರಾಯ, ತಕ್ಷಣವೇ ಕ್ರಮ ಜರುಗಿಸುತ್ತೇವೆ. ಇನ್ನು ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳ ನಿಲುಗಡೆ ಬಗ್ಗೆ ಕ್ರಮ ಜರುಗಿಸಲಾಗುವುದು ಅಂತಾ ತಿಳಿಸಿದರು. ಈ ವೇಳೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಲಕ್ಷ್ಮೀಗಣೇಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *