Header Ads
Header Ads
Breaking News

ನದಿಗೆ ಸ್ನಾನಕ್ಕೆಂದು ತೆರಳಿದ ವ್ಯಕ್ತಿ ಕಾಲು ಜಾರಿ ಬಿದ್ದ ಸಾವು

ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಇನ್ನಾ ಗ್ರಾ.ಪಂ. ವ್ಯಾಪ್ತಿಯ ಮುದ್ದಾನು ದೇವಳದ ಬಳಿ ನಡೆದಿದೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸು ಸಾರ್ವೆಗಾರ್(60) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಸ್ನಾನಕ್ಕೆಂದ್ದು ಪಕ್ಕದ ನದಿಗೆ ಹೋದವರು ನಾಪತ್ತೆಯಾಗಿದ್ದರು. ಇದೀಗ ಶವ ನದಿಯಲ್ಲಿ ಪತ್ತೆಯಾಗಿದೆ. ಶವವನ್ನು ಪಡುಬಿದ್ರಿ ಆಪತ್ತ್ ಭಾಂದವ ಆಸೀಪ್ ಮೇಲೆತ್ತಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ದ ಶವಾಗಾರಕ್ಕೆ ಸಾಗಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply