Header Ads
Header Ads
Header Ads
Breaking News

ನಮ್ಮ ಉದ್ದೇಶ ಏನಿದ್ದರೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು : ಮಂಗಳೂರು ಏರ್‌ಪೋರ್ಟ್‌ನಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ

 ಮಂಗಳೂರಿನಲ್ಲಿ ನಡೆದ ಘಟನೆಗೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆಗೂಡಿ ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿದ್ದೇವೆ. ಘಟನೆಯ ಹಿನ್ನೆಲೆ ಏನು ಎನ್ನುವುದನ್ನು ಕೂಲಂಕುಷವಾಗಿ ಚರ್ಚೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ ಪೊಲೀಸ್ ಉನ್ನತ ಅಧಿಕಾರಿಗಳು, ಗೃಹಸಚಿವರು, ಉಪಮುಖ್ಯಮಂತ್ರಿಗಳು, ಕರಾವಳಿಯ ಶಾಸಕರ ಜೊತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್‌ವೈ,ಸರ್ಕ್ಯೂಟ್ ಹೌಸ್‌ನಲ್ಲಿ ಎಲ್ಲರನ್ನು ಭೇಟಿ ಮಾಡುತ್ತೇವೆ. ನಮ್ಮ ಉದ್ದೇಶ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು. ಸರ್ಕ್ಯುಟ್ ಹೌಸ್‌ನಲ್ಲಿ ಎಲ್ಲರನ್ನು ಭೇಟಿ ಮಾಡಿ ಬಳಿಕ ಮುಂದಿನ ವಿಚಾರಗಳನ್ನು ತಿಳಿಸುತ್ತೇವೆ ಎಂದು ಹೇಳಿದರು.

ಇನ್ನು ಮಂಗಳೂರಿನಲ್ಲಿ ನಡೆದ ಘಟನೆಗೆ ಕಾಂಗ್ರೆಸ್‌ನವರು ಹೊಣೆ ಎಂದು ಹೇಳಲು ನಾನು ಇಚ್ಛೆ ಪಡುವುದಿಲ್ಲ. ಆದರೆ ಅವರ ಕಡೆಯವರೆಲ್ಲಾ ಗೊಂದಲ ಮಾಡಿ, ಶಾಂತಿ ಸುವ್ಯವಸ್ಥೆಗೆ ಅಡ್ಡಿ ಮಾಡಿದರು. ಅವರ ಸಹಕಾರದಿಂದಲೇ ಈ ಎಲ್ಲಾ ಘಟನಾವಳಿಗಳು ನಡೆದಿದ್ದಾವೆ ಹೊರತು ನಾವಲ್ಲ ಎನ್ನುವುದು ಜಗತ್ತಿಗೇ ಗೊತ್ತಿದೆ. ಬೇಜವಾಬ್ದಾರಿ ಹೇಳಿಕೆಯನ್ನು ಯಾರು ಬೇಕಿದ್ದರೂ ಕೊಡಬಹುದು. ಸತ್ಯ ಸಂಗತಿ ಎನ್ನುವುದು ಮುಂದೆ ಗೊತ್ತಾಗುತ್ತದೆ ಎಂದು ಸಿಎಂ ಬಿಎಸ್‌ವೈ ಹೇಳಿದರು.

ಇನ್ನು ಸಿದ್ದರಾಮಯ್ಯನವರಿಗೆ ಮಂಗಳೂರು ಪ್ರವೇಶಕ್ಕೆ ಅವಕಾಶ ನಿರಾಕರಣೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಬಿಎಸ್‌ವೈ, ಕರ್ಫ್ಯೂ ಮುಗಿದ ಬಳಿಕ ಸಿದ್ದರಾಮಯ್ಯನವರು ಒಂದು ವಾರ ಬೇಕಿದ್ದರೂ ಉಳಿದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *