Header Ads
Header Ads
Breaking News

ನವೆಂಬರ್ 24ರಂದು ಖಗೋಳಶಾಸ್ತ್ರ ಕಾರ್ಯಾಗಾರ ‘ತಾರಾಲೋಕ’ ಕಾರ್ಯಾಗಾರ

ಉಜಿರೆ, ನ.20 ; ಎಸ್.ಡಿ.ಎಂ ಪದವಿ ಕಾಲೇಜಿನ ರತ್ನತ್ರಯ ಸಭಾಭವನದಲ್ಲಿ ನವೆಂಬರ್ 24 ರಂದು ‘ತಾರಾಲೋಕ’ ಖಗೋಳಶಾಸ್ತ್ರ ಕಾರ್ಯಾಗಾರ ಜರಗಲಿದೆ.

ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಭೌತಶಾಸ್ತ್ರ ವಿಭಾಗ, ಮಂಗಳೂರು ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಎಸ್.ಡಿ.ಎಂ ಕಾಲೇಜಿನ ರಸಾಯನ ಶಾಸ್ತ್ರ ಮತ್ತು ಗಣಿತ ಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಬಿ ಯಶೋವರ್ಮ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ 9.30 ರಿಂದ ಕಾರ್ಯಕ್ರಮ ನಡೆಯಲಿದ್ದು, ಎಸ್.ಡಿ.ಎಂ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಸತೀಶ್ಚಂದ್ರ ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾಗಿರುವ ಡಾ. ಕೆ. ವಿ ರಾವ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Related posts

Leave a Reply

Your email address will not be published. Required fields are marked *