Header Ads
Breaking News

ನಾಗರಪಂಚಮಿ ದಿನ ಕುಕ್ಕೆ ಹಾಗೂ ಕುಡುಪು ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ

ನಾಗರ ಪಂಚಮಿ ಹಬ್ಬಕ್ಕೂ ಕೊರೊನಾ ಎಫೆಕ್ಟ್ ತಟ್ಟಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಸಂಪೂರ್ಣ ನಿಬರ್ಂಧ ಹೇರಲಾಗಿದೆ. ಅದರಲ್ಲೂ ನಾಗರಪಂಚಮಿ ದಿನವೇ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಅನ್ನುವ ಆಡಳಿತ ಮಂಡಳಿಯ ಪ್ರಕಟಣೆ ಭಕ್ತರಲ್ಲಿ ನಿರಾಸೆ ಮೂಡಿಸಿದೆ.ಅಂದ್ಹಾಗೇ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರಾಜ್ಯ ಹಾಗೂ ದೇಶಾದ್ಯಂತದಿಂದ ಜನಸಾಗರವೇ ಹರಿದು ಬರುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ನಾಗರಪಂಚಮಿಯಂದು ಭಕ್ತರಿಗೆ ದೇಗುಲಕ್ಕೆ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ. ಪ್ರಕಟಣೆ ಹೊರಡಿಸಿರುವ ದೇವಸ್ಥಾನದ ಆಡಳಿತ ಮಂಡಳಿ ಸಾಮಾಜಿಕ ಅಂತರ ಕಾಪಾಡಲು ಕಷ್ಟಕರವಾಗುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಈ ಬಾರಿ ಅರ್ಚಕರಿಂದ ಮಾತ್ರ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಾಗುತ್ತಿದೆ.ಇನ್ನೂ, ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು ದೇಗುಲಕ್ಕೂ ಭಕ್ತರ ಪ್ರವೇಶಕ್ಕೆ ನಿಬರ್ಂಧ ವಿಧಿಸಲಾಗಿದೆ. ನಾಗರ ಪಂಚಮಿಯ ದಿನದ ಸೇವೆಗಳು, ಸೇವಾಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ.ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಶ್ರೀ ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

Leave a Reply

Your email address will not be published. Required fields are marked *