Header Ads
Breaking News

ನಾಗರ ಪಂಚಮಿಗೂ ತಟ್ಟಿದ ಕೊರೊನಾ ಎಫೆಕ್ಟ್; ನಾಗರ ಪಂಚಮಿ ದಿನ ಕುಡುಪು ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ

ಕೊರೊನಾ ಕಾರಣದಿಂದಾಗಿ ನಾಗರಪಂಚಮಿ ದಿನವಾದ ಜುಲೈ 25 ರಂದು ಕುಡುಪು ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಕುಡುಪುವಿನ ಆಡಳಿಯ ಮಂಡಳಿ ಪ್ರಕಟಣೆ ತಿಳಿಸಿದೆ. ಕೋವಿಡ್ 19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕ ಸಂಖ್ಯೆಯಲ್ಲು ಆಗಮಿಸುವ ಭಕ್ತಾಧಿಗಳಿಂದ ಸಾಮಾಜಿಕ ಅಂತರವನ್ನು ಕಾಡಪಾಡುವುದು ಕಷ್ಟಕರವಾಗುವುದರಿಂದ ಮುಂಜಾಗ್ರತ ಕ್ರಮವಾಗಿ ನಾಗರ ಪಂಚಮಿ ದಿನವಾದ ಜುಲೈ 25 ರಂದು ಭಕ್ತಾದಿಗಳಿಗೆ ಶ್ರೀ ಕ್ಷೇತ್ರಕ್ಕೆ ಭೇಟಿಯನ್ನು ನಿರ್ಬಂಧಿಸಲಾಗಿದೆ. ಅಂದು ಎಲ್ಲಾ ಭಕ್ತಾಧಿಗಳಿಗೆ ದೇವಾಲಯದ ಆವರಣಕ್ಕೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ದಿನದಂದು ಯಾವುದೇ ಭಕ್ತಾಭಿಮಾನಿಗಳು ದೇವಾಲಯಕ್ಕೆ ಭೇಟಿ ನೀಡದೆ ಸಹಕರಿಸಬೇಕಾಗಿ ಆಡಳಿತ ಮಂಡಳಿ ವಿನಂತಿಸಿದೆ.

Related posts

Leave a Reply

Your email address will not be published. Required fields are marked *