Header Ads
Breaking News

ನಾಡಿನಾದ್ಯಂತ ಶಿವರಾತ್ರಿ ಹಬ್ಬದ ಸಂಭ್ರಮ; ಶಿವಸ್ಮರಣೆ ಮಾಡಿ ಶಿವನ ಕೃಪೆಗೆ ಪಾತ್ರರಾದ ಭಕ್ತರು

ನಾಡಿನಾದ್ಯಂತ ಶಿವರಾತ್ರಿ ಹಬ್ಬದ ಸಂಭ್ರಮ. ಹಗಲು ಉಪವಾಸವಿದ್ದು, ರಾತ್ರಿ ಜಾಗರಣೆ ಮಾಡಿ ಶಿವ ಸ್ಮರಣೆ ಮಾಡಿ ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಅದರಂತೆ ದಕ್ಷಿಣ ಕನ್ನಡ ಪ್ರಸಿದ್ಧ ಶಿವನ ಆಲಯ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲೂ ವಿಶೇಷವಾಗಿ ಮಹಾಶಿವರಾತ್ರಿಯನ್ನು ಆಚರಿಸಲಾಯಿತು. ಶಿವನಿಗೆ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಭಕ್ತರು ರುದ್ರಾಭಿಷೇಕ, ಬಿಲ್ವಾರ್ಚನೆ. ಶಿವನ ಭಕ್ತರಿಂದ ವಿಶೇಷ ಪೂಜಾ ನೆರವೇರಿಸಲಾಯಿತು. ರಾತ್ರಿ ಕುದ್ರೋಳಿ ಕ್ಷೇತ್ರದಲ್ಲಿ ರಥೋತ್ಸವ ಸಹಿತ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಿದ್ಯುತ್ ದೀಪಾಲಂಕಾರ ಕಂಗೊಳಿಸುತ್ತಿತ್ತು. ಅಲ್ಲದೇ ಕ್ಷೇತ್ರದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

Leave a Reply

Your email address will not be published. Required fields are marked *