Header Ads
Header Ads
Header Ads
Header Ads
Header Ads
Header Ads
Breaking News

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ : ವಿಟ್ಲ ತಾಲೂಕಿನ ಕೇಪು ಗ್ರಾಮದ ಅಜ್ಜಿನಡ್ಕದಲ್ಲಿ ಘಟನೆ

ವಿಟ್ಲ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕೇಪು ಗ್ರಾಮದ ಅಜ್ಜಿನಡ್ಕದಲ್ಲಿ ನಡೆದಿದೆ.

ಕೇಪು ಗ್ರಾಮದ ಅಜ್ಜಿನಡ್ಕ ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ ಜನಾರ್ಧನ ನಾಯ್ಕ(36) ಮೃತಪಟ್ಟ ಯುವಕ. ಈತ ಅ.೫ರಂದು ಮನೆಯಿಂದ ಅಜ್ಜಿನಡ್ಕ ಪೇಟೆಗೆಂದು ತೆರಳಿದವ ಹಿಂತಿರುಗಿ ಬಾರದೇ ನಾಪತ್ತೆಯಾಗಿದ್ದು, ಇದರಿಂದ ಮನೆಮಂದಿ ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಆತನ ಪತ್ತೆಯಾಗಿರಲಿಲ್ಲ. ಬುಧವಾರ ಮಧ್ಯಾಹ್ನ ವೇಳೆ ಮನೆಯ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಕೆರೆಯಲ್ಲಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೆರೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲ ಜಾರಿ ಬಿದ್ದು ಮೃತಪಟ್ಟಿದ್ದಾರೆಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಳೆತು ದುರ್ನಾತ ಬೀರುತ್ತಿದ್ದ ಮೃತದೇಹವನ್ನು ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ಹಾಗೂ ಸ್ಥಳೀಯರು ಕೆರೆಯಿಂದ ಮೇಲೆತ್ತಿದ್ದಾರೆ. ಘಟನೆ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್ ಮೊದಲಾದವರು ಭೇಟಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *