Breaking News

ನಾಲ್ಕು ದಿನಗಳ ಬಳಿಕ ಕುಸಿದ ಮುಂಬಯಿ ಶೇರು, ಅದರ ನಡುವೆಯೂ ಕೆಲವಕ್ಕೆ ಮುನ್ನಡೆ

ನಾಲ್ಕು ದಿನಗಳ ನಿರಂತರ ಏರು ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಐದನೇ ದಿನದ ವಹಿವಾಟಿನಲ್ಲಿ ಮುಗ್ಗರಿಸಿದ್ದು 62.83 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 30118.33 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 21.50 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 9,400.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ಹೂಡಿಕೆದಾರರು ಹಾಗೂ ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಪ್ರಯುಕ್ತ ಸೆನ್ಸೆಕ್ಸ್, ನಿಫ್ಟಿ ಕುಸಿದರೂ, 9400 ಅಂಕಗಳ ಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ನಿಫ್ಟಿ ಸಫಲವಾದದ್ದು ವಿಶೇಷ.
ಇಂದಿನ ವಹಿವಾಟಿನಲ್ಲಿ ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1784 ಶೇರುಗಳು ಹಿನ್ನಡೆಗೆ ಗುರಿಯಾದವು; 1,000 ಶೇರುಗಳು ಮುನ್ನಡೆಯನ್ನು ಕಂಡವು.

Related posts

Leave a Reply