Header Ads
Header Ads
Header Ads
Breaking News

ನಿಗದಿತ ಸಮಯಕ್ಕೆ ನಡೆಯದ ಹಿರಿಯ ನಾಗರಿಕರ ದಿನಾಚರಣೆ ಕಾದು ಸುತ್ತಾದ ಹಿರಿಯ ಜೀವಗಳು, ಜನಪ್ರತಿನಿಧಿಗಳ ನಿರಾಶಕ್ತಿ

ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಅದ್ರೆ ಬೆಳಿಗ್ಗೆ ೧೦ಗಂಟೆಗೆ ಆರಂಭಗೊಳ್ಳಬೇಕಿದ್ದ ಕಾರ್ಯಕ್ರಮವೂ ಒಂದೂವರೆ ಗಂಟೆ ತಡವಾಗಿ ಆರಂಭಗೊಂಡಿತ್ತು. ಇದರಿಂದಾಗಿ ಹಿರಿಯ ನಾಗರಿಕರು ಕಾರ್ಯಕ್ರಮ ಯಾವಾಗ ಆರಂಭಗೊಳ್ಳತ್ತೆ ಎಂದು ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಯಿತು.

ಸುಮಾರು ೧೧.೪೫ಕ್ಕೆ ಕಾರ್ಯಕ್ರಮ ಆರಂಭಗೊಂಡರೂ, ಸಚಿವ ಖಾದರ್ , ಶಾಸಕ ಜೆ.ಆರ್.ಲೋಬೋ ಮತ್ತು ಶಾಸಕ ಕೆ.ಅಭಯಚಂದ್ರಜೈನ್, ವಿಧಾನಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಸಕರ ಹೆಸ್ರು ಆಹ್ವಾನ ಪ್ರತಿಕೆಯಲ್ಲಿ ಇತ್ತು. ಅದರೆ ಸಚಿವ ರೈ ಹೊರಾತಾಗಿ ಬೇರ್‍ಯಾರ ಜನಪ್ರತಿನಿಧಿಗಳು ಈ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣಲಿಲ್ಲ. ಅವರ್‍ಯಾರು ಕೊನೆವೆರೆಗೂ ಕಾರ್ಯಕ್ರಮಕ್ಕೆ ಬರಲಿಲ್ಲ.ತದ ಬಳಿಕ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಉದ್ಘಾಟಿಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ದೀಪು ಹೆಚ್.ಎನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಲ್ಲನ ಗೌಡ ಮತ್ತಿತರು ಉಪಸ್ಥತಿರಿದ್ರು.

Related posts

Leave a Reply