Header Ads
Breaking News

ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ

ನಿಟ್ಟೆ ಇನ್ ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ನಿಟ್ಟೆ ವಿಶ್ವವಿದ್ಯಾನಿಲಯ ಕ್ಯಾಂಪಸ್‌ನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಡಿಟೋರಿಯಂನಲ್ಲಿ ನಡೆಯಿತು. ವಿಧಾನ ಪರಿ?ತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ದ್ವೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಶಿಕ್ಷಣ ಪಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಲುವ ಕಾರ್ಯ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿರುವಾಗ ನಿಮ್ಮ ಹೆತ್ತವರು ಶಿಕ್ಷಣಕ್ಕಾಗಿ ಹಣ ವೆಚ್ಚ ಮಾಡಿರುತ್ತಾರೆ. ಹೆತ್ತವರ ಆಶಯದೊಂದಿಗೆ ಶಿಕ್ಷಣ ಕಲಿಯುವ ಸಂಸ್ಥೆ, ಅಧ್ಯಾಪಕರ ಮಾರ್ಗದರ್ಶನದಲ್ಲಿ ವೃತ್ತಿ ಕೌಶಲ್ಯದೊಂದಿಗೆ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.

ನಿಟ್ಟೆ ಇನ್ ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ಧನೇಶ್ ಕುಮಾರ್ ಕೆ. ಯು. ಸಂಸ್ಥೆಯ ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು.
ಮಣಿಪಾಲ ವಿಶ್ವವಿದ್ಯಾನಿಲಯದ ಆರ್ಥೋಪೆಡಿಕ್ ಸರ್ಜನ್ ಹಾಗೂ ಗೌರವ ಪ್ರಾಧ್ಯಾಪಕ ಡಾ. ಯೋಗೀಶ್ ಡಿ. ಕಾಮತ್ ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ಇನ್ ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಪುರು?ತ್ತಮ ಚಿಪ್ಪಾಲ, ಡಾ. ಸುಚೇತಾ ಪಿ.ಎಸ್.ವಿದ್ಯಾರ್ಥಿ ನಾಯಕಿ ಜುಮಾನ ಭಗತ್, ವಿದ್ಯಾರ್ಥಿನಿ ಅರ್ಪಿತಾ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *