Header Ads
Header Ads
Breaking News

ನಿಫಾ ಸೋಂಕು ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್.!

ಲಸಿಕೆಯೇ ಇಲ್ಲದ ನಿಗೂಢ ವೈರಾಣು ಸೋಂಕು ಕೇರಳದಲ್ಲಿ ಪತ್ತೆಯಾದ ಸೋಂಕಿಗೆ 10 ಮಂದಿ ಬಲಿ ಲಸಿಕೆಯೇ ಇಲ್ಲದ ನಿಗೂಢ ವೈರಾಣು ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ವೈರಾಣು ಸೋಂಕಿಗೆ ಕನಿಷ್ಟ 10 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳದ ಕೊಯಿಕ್ಕೋಡ್ ಜಿಲ್ಲೆಯ ಪೆರಂಬಾರಾದಲ್ಲಿ ಕೇವಲ ಎರಡು ವಾರದಲ್ಲಿ ಒಂದೇ ಕುಟುಂಬದ ಮೂವರು ಸೇರಿ 10 ಜನ ನಿಗೂಢ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ಇನ್ನೂ 25ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ನಿಪಾಹ್ ವೈರಾಣು ಸೋಂಕು ಶಂಕಿತ ರೋಗಿಗಳನ್ನು ತೀವ್ರ ಕಟ್ಟೆಚ್ಚರದಿಂದ ಚಿಕಿತ್ಸೆಗೆ ಒಳಪಡಿಸಲಾಗುತ್ತಿದ್ದು, ಪೂರಕ ಔಷಧಗಳಿಂದ ಉಪಚರಿಸಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.ನಿಪಾಹ್ ವೈರಾಣು ಸೋಂಕಿನ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆ ಇನ್ನು ಕೇರಳದಲ್ಲಿ ಆತಂಕ ಸೃಷ್ಟಿ ಮಾಡಿರುವ ಮಾರಕ ನಿಪಾಹ್ ವೈರಾಣು ಸೋಂಕು ನಿಯಂತ್ರಣಕ್ಕೆ ಕೇರಳ ಸರ್ಕಾರ ಕಲ್ಲಿಕೋಟೆ ಜಿಲ್ಲಾಧಿಕಾರಿ ಯುವಿ ಜೋಸ್ ಅವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು, ಪ್ರಸ್ತುತ ವೈರಾಣು ಸೋಂಕಿಗೆ ಬಲಿಯಾಗಿರುವ ಮೃತರ ರಕ್ತದ ಮಾದರಿಯನ್ನು ಸಂಗ್ರಹಿಸಿ ಮಣಿಪಾಲದ ವೈರಾಲಜಿ ಪ್ರಯೋಗಾಲಯ ಸಂಸ್ಥೆಗೆ ರವಾನೆ ಮಾಡಲಾಗಿದೆ. ಕೇರಳದಲ್ಲಿನ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರ ಕೂಡ ಗಂಭೀರ ಚಿಂತನೆಯಲ್ಲಿ ತೊಡಗಿದ್ದು, ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಕಾರ್ಯದರ್ಶಿಗಳೊಂದಿಗೆ ಕೋಯಿಕ್ಕೋಡ್ ಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಈ ಸಂಬಂಧ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Related posts

Leave a Reply