Header Ads
Breaking News

ನಿರಪೇಕ್ಷಣಾ ಪತ್ರ ಪಡೆದು ಹಕ್ಕು ಪತ್ರ ವಿತರಿಸುವ ಕಾರ್ಯ ಮಾಡಲಾಗುವುದು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ

ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಹಕ್ಕು ಪತ್ರಗಳನ್ಬು ಜಿಲ್ಲಾಧಿಕಾರಿ ಮತ್ತು ಸಂಬಂಧಿತ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಪಡೆದು ಹಕ್ಕು ಪತ್ರ ವಿತರಿಸುವ ಕಾರ್ಯ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಮಂಗಳೂರು ಬಿ. ಹೋಬಳಿ ವ್ಯಾಪ್ತಿಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ 94ಸಿಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಕೆಲವೊಂದು ಹಕ್ಕುಪತ್ರಗಳು ಅರಣ್ಯ ಇಲಾಖೆ ಸೇರಿದಂತೆ ವಿವಿಧ ಕಾರಣಗಳಿಂದ ಹಕ್ಕುಪತ್ರ ವಿಳಂಬವಾಗಿದೆ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗುವುದು ಎಂದರು.

ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ.ಖಾದರ್ ಮಾತನಾಡಿ ಹಕ್ಕುಪತ್ರ ಪಡೆದ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ಈ ಆಸ್ತಿಯನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಕಾರ್ಯ ಆಗಬೇಕು. ಹಕ್ಕುಪತ್ರ ತಮ್ಮ ಮನೆಯ ಮಾಲಕತ್ವವನ್ನು ಹೊಂದಿದಂತಾಗಿದೆ. ಮುಂದಿನ ದಿನಗಳಲ್ಲಿ ನಿರಂತರ ಕುಡಿಯುವ ನೀರಿನ ಸೌಕರ್ಯ ಅಭಿವೃದ್ದಿಯಾಗುತ್ತಿದ್ದು, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯದ ಅಭಿವೃದ್ಧಿಯಾಗುತ್ತಿದದು ಮುಂದಿನ ದಿನಗಳಲ್ಲಿ ಎಲ್ಲರೂ ಸೌಹಾರ್ಧಯುತ ಜೀವನ ನಡೆಸುವುದರೊಂದಿಗೆ ಸಹಕಾರ ಮನೋಭಾವವನ್ನು ಬೆಳೆಸಿಕೊಂಡು ಮಾದರಿಯಾಗಿ ಜೀವನ ನಡೆಸುವಂತಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು , ಸದಸ್ಯರಾದ ಸಿದ್ದಿಕ್ ತಲಪಾಡಿ, ಜಬ್ಬಾರ್ ಬೋಳಿಯಾರ್,ಪದ್ಮಾವತಿ ಕೊಣಾಜೆ,
ಸೋಮೇಶ್ವರ ಪುರಸಭೆ ಅಧ್ಯಕ್ಷ ರಾಜೇಶ್ ಎ. ಉಚ್ಚಿಲ್, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಝರ್ ಷಾ ಪಟ್ಟೋರಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *