Header Ads
Breaking News

ನೀಟ್ ಪರೀಕ್ಷಾ ಫಲಿತಾಂಶದಲ್ಲಿ ಆಳ್ವಾಸ್‌ಗೆ ದಾಖಲೆಯ ಫಲಿತಾಂಶ

2018ರಲ್ಲಿ ನಡೆದ ರಾಷ್ಟ್ರೀಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಗೆ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 3 ಸಾವಿರದ648 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 3 ಸಾವಿರ 284 ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆಯುವ ಮೂಲ90.02ಶೇಕಡವಾರು ದಾಖಲೆಯ ಫಲಿತಾಂಶವನ್ನು ದಾಖಲಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.ಈ ಬಗ್ಗೆ ಮೂಡಬಿದಿರೆಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇವರಲ್ಲಿ 26 ವಿದ್ಯಾರ್ಥಿಗಳು50೦ಕ್ಕೂ ಹೆಚ್ಚು ಅಂಕಗಳನ್ನು ಪಡೆದಿದ್ದು, 224 ವಿದ್ಯಾರ್ಥಿಗಳು 400ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದಿರುತ್ತಾರೆ.ರಾಷ್ಟ್ರೀಯ ಮಟ್ಟದಲ್ಲಿ ಕೆಟಗೆರೆ ವಿಭಾಗದಲ್ಲಿ ಪದ್ಮಾವತಿ, ಯತೀಶ, ಗುಣಶೀಲ, ವಂಶಿತೇಜ, ವೆಂಕಟೇಶ ದೊರೆ, ಗೌತಮ ಬುದ್ಧ, ನಂದೀಶ್ ಮತ್ತು ನೇತ್ರೇಶ್ ರ್‍ಯಾಂಕ್‌ಗಳನ್ನು ಪಡೆದಿರುತ್ತಾರೆ.ಭಿನ್ನಚೇತನರ ಪಟ್ಟಿಯಲ್ಲಿ ಮಂಜುನಾಥ್ ದೊಂಬಾರ್, ರಕ್ಷಿತಾ ಬಿ.ಪಿ, ಭಾಗ್ಯಶ್ರೀ, ಅಜಯ್ ಕುಮಾರ್ ನೇಯ ರ್‍ಯಾಂಕ್ ರಾಷ್ಟ್ರೀಯ ಮಟ್ಟದಲ್ಲಿ ಪಡೆದಿರುತ್ತಾರೆ ಎಂದು ಮಾಹಿತಿ ನೀಡಿದರು.ಆಳ್ವಾಸ್ ಶಿಕ್ಷರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು.

 

Related posts

Leave a Reply