Header Ads
Header Ads
Header Ads
Breaking News

ನೂಜಿಬಾಳ್ತಿಲದ ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರವಿಗೆ ಆಗ್ರಹ ತೀವ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ ಶಾಲಾ ಮಕ್ಕಳಿಂದಲೂ ಮದ್ಯದಂಗಡಿ ತೆರವುಗೊಳಿಸಲು ಆಗ್ರಹ

ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರ ಕೂಡ ಮುಂದುವರಿದಿದೆ.

ಇಂದು ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಶಾಲಾ ಮಕ್ಕಳು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಮದ್ಯದಂಗಡಿಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ: ದೀಪಕ್ ಉಪ್ಪಿನಂಗಡಿ

Related posts

Leave a Reply