Header Ads
Header Ads
Breaking News

ನೂತನವಾಗಿ ನಿರ್ಮಾಣಗೊಂಡ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ

ಕುಂದಾಪುರದ ಹಟ್ಟಿಯಂಗಡಿ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿರುವ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರು ಕಟ್ಟಡವನ್ನು ಉದ್ಘಾಟಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವೆ ಡಾ. ಜಯಮಾಲಾ ಅವರು, ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನು ಮುಂದೆ ಜನರಿಗೆ ಲಭ್ಯವಾಗಲಿದೆ. ಈ ಭಾಗದ ಜನರ ಬಹುವರ್ಷಗಳ ಕನಸು ಇಂದು ನನಸಾಗಿದೆ. ಸುಸಜ್ಜಿತವಾದ ಆರೋಗ್ಯ ಕೇಂದ್ರವನ್ನು ಇಲ್ಲಿನ ಜನರು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಲಿ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷೆ ವಹಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಮ್ ಸುಕುಮಾರ ಶೆಟ್ಟಿಯವರು 2003ರಲ್ಲಿ ಜನರ ಸೇವೆಗೆ ಲಭ್ಯವಿರಬೇಕಾದ ಆರೋಗ್ಯ ಕೇಂದ್ರ 2019ರಲ್ಲಿ ನಾನು ಎಮ್‌ಎಲ್‌ಎ ಆಗಿ, ಜಯಮಾಲಾ ಅವರು ಉಸ್ತುವಾರಿ ಸಚಿವೆಯಾದ ಬಳಿಕ ಉದ್ಘಾಟನೆಗೊಂಡಿದೆ. ವೈದ್ಯರ ಕೆಲಸ ಕೇವಲ ಔಷಧಿ ಕೊಡಿವುದು ಮಾತ್ರವಲ್ಲ. ಆಸ್ಪತ್ರೆಗೆ ಬರುವ ರೋಗಿಗಳನ್ನು ಪ್ರೀತಿ, ವಾತ್ಸಲ್ಯದಿಂದ ನೋಡಿಕೊಳ್ಳಬೇಕು. ಈ ಕೆಲಸ ಇಲ್ಲಿನ ಯುವವೈದ್ಯರಾದ ಡಾ. ರಂಗನಾಥ ಮಾಡುತ್ತಾರೆ ಎಂಬ ಭರವಸೆ ನನಗಿದೆ ಎಂದರು.ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜ್ಯೋತಿ ಎಮ್, ಶಂಕರ್ ಪೂಜಾರಿ, ಬಾಬು ಹೆಗ್ಡೆ, ತಾ.ಪಂ ಸದಸ್ಯ ಕರುಣ್ ಪೂಜಾರಿ, ಹಟ್ಟಿಯಂಗಡಿ ದೇವಸ್ಥಾನದ ಪ್ರಧಾನ ಅರ್ಚಕ ಬಾಲಚಂದ್ರ ಭಟ್, ಹಟ್ಟಿಯಂಗಡಿ ಗ್ರಾ.ಪಂ ಅಧ್ಯಕ್ಷ ರಾಜು ಶೆಟ್ಟಿ, ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply