Header Ads
Header Ads
Breaking News

ನೂತನ ಕಾಪು ತಾಲೂಕು ಬುಧವಾರದಿಂದ ಕಾರ್ಯಾರಂಭ ಸಚಿವ ಕಾಗೋಡು ತಿಮ್ಮಪ್ಪನವರು ನೂತನ ತಾಲೂಕನ್ನು ಉದ್ಘಾಟನೆ

ಹೊಸದಾಗಿ ಘೋಷಿಸಲ್ಪಟ್ಟಿರುವ ನೂತನ ಕಾಪು ತಾಲೂಕು ಬುಧವಾರದಿಂದ ಕಾರ್ಯಾರಂಭಿಸಲಿದ್ದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರು ನೂತನ ತಾಲೂಕನ್ನು ಉದ್ಘಾಟಿಸಲಿದ್ದಾರೆ ಎಂದು ಕಾಪು ಶಾಸಕ ವಿನಯ ಕುಮಾರ್ ಸೊರಕೆ ಹೇಳಿದರು.ಅವರು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಕಾಪು ಬಂಗ್ಲೆ ಮೈದಾನದಲ್ಲಿ ಅಪರಾಹ್ನ 3 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಘನ ಉಪಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವಿನಯ ಕುಮಾರ್ ಸೊರಕೆ ವಹಿಸಲಿದ್ದಾರೆ,ಕಾರ್ಕಳ ಶಾಸಕ ಸುನಿಲ್ ಕುಮಾರ್,ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್,ಜಿ.ಪಂ ಅಧ್ಯಕ್ಷ ದಿನಕರ ಬಾಬು, ಸಂಸದೆ ಶೋಭಾ ಕರಂದ್ಲಾಜೆ,ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್, ಸಂಸದ ಬಿಎಸ್ ಯಡಿಯೂರಪ್ಪ,ಶಾಸಕ ಗೋಪಾಲ ಪೂಜಾರಿ,ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ,ಕಾಪು ಪುರಸಭೆಯ ಅಧ್ಯಕ್ಷೆ ಮಾಲಿನಿ ತಾ.ಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್,ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ,ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಎಂ.ಎ.ಗಫೂರ್ ಸಹಿತ ವಿವಿಧ ಇಲಾಧಿಕಾರಿಗಳು ಮುಖ್ಯ ಅತಿಥಿಗಳಾಗಿರುತ್ತಾರೆ ಎಂದರು.
ವರದಿ: ಸುರೇಶ್ ಎರ್ಮಾಳ್ ಪಡುಬಿದ್ರಿ

Related posts

Leave a Reply