Header Ads
Header Ads
Breaking News

ನೂತನ ಸಚಿವ, ಶಾಸಕರಿಗೆ ಅಭಿನಂದನೆ: ಉಳ್ಳಾಲ ದರ್ಗಾ ವತಿಯಿಂದ ಕಾರ್ಯಕ್ರಮ

ಪ್ರಾರ್ಥನೆ, ಸಹಕಾರ ಮೂಲಕ ಮತ್ತೊಮ್ಮೆ ಗೆದ್ದು ಸಚಿವನಾಗಿ ಬಂದಿದ್ದೇನೆ. ನೀವಿಟ್ಟ ವಿಶ್ವಾಸಕ್ಕೆ ಎಂದಿಗೂ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಖಾತೆ ಸಚಿವ ಯು.ಟಿ.ಖಾದರ್ ಹೇಳಿದರು.

ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ವತಿಯಿಂದ ನೂತನ ಸಚಿವ ಹಾಗೂ ಶಾಸಕರುಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಇತಿಹಾಸ ಪ್ರಸಿದ್ಧವಾಗಿರುವ ದರ್ಗಾ ಅಭಿವೃದ್ಧಿಗೆ ಇನ್ನಷ್ಟು ಅನುದಾನ ದೊರಕಿಸಲು ಪ್ರಯತ್ನಿಸುತ್ತೇನೆ. ಶಾಂತಿ ಸೌಹಾರ್ದತೆಗೆ ದರ್ಗಾ ಸಮಿತಿ ಪ್ರಯತ್ನಿಸಲಿ, ಅಭಿವೃದ್ಧಿಯ ಉಳ್ಳಾಲಕ್ಕೆ ನಾನು ಪಣ ತೊಟ್ಟಿದ್ದೇನೆ ಎಂದರು.ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್, ವಿದಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರನ್ನು ಅಭಿನಂದಿಸಲಾಯಿತು.

 

ನಗರ ಸಭಾಧ್ಯಕ್ಷ ಹುಸೈನ್ ಕುಂಞಿಮೋನು, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಯು.ಕೆ.ಮೋನು, ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಸದಾಶಿವ ಉಳ್ಳಾಲ್, ದರ್ಗಾ ಉಪಾಧ್ಯಕ್ಷರಾದ ಯು.ಕೆ.ಮೋನು ಇಸ್ಮಾಯಿಲ್, ಬಾವ ಮುಹಮ್ಮದ್, ಪ್ರದಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ, ಜತೆ ಕಾರ್ಯದರ್ಶಿಗಳಾದ ನೌಷಾದ್ ಅಲಿ, ಆಝಾದ್ ಇಸ್ಮಾಯಿಲ್, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಮುಹಮ್ಮದ್ ಹಳೆಕೋಟೆ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply