Header Ads
Header Ads
Breaking News

ನೆರೆ ಆವರಿಸಿದ ಪಾವೂರು ಉಳಿಯ ದ್ವೀಪ ಪ್ರದೇಶ. ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಭೇಟಿ.

ಮಂಗಳೂರು ತಾಲೂಕು ಪಂಚಾಯತ್ ವ್ಯಾಪ್ತಿಯ ಪಾವೂರು ಗ್ರಾಮದ ಉಳಿಯ ಎಂಬ ದ್ವೀಪವು ನೆರೆಯಿಂದ ಜಲಾವೃತಗೊಂಡಿದ್ದು ಅಲ್ಲಿನ ನಿವಾಸಿಗಳ ನೆರವಿಗೆ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನುರವರು ಭೇಟಿ ನೀಡಿ ನಿವಾಸಿಗಳಿಗೆ ಧೈರ್ಯ ತುಂಬಿದರು. ಮುಂಜಾಗೃತ ಕ್ರಮಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ರವರ ಸೂಚನೆಯಂತೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುತ್ತಿದ್ದು ನಿವಾಸಿಗಳು ಆತಂಕಪಡಬೇಕಾಗಿಲ್ಲ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉಳಿಯ ಇನ್ಫೆಂಟ್ ಜೀಸಸ್ ಚರ್ಚ್ ಧರ್ಮಗುರು ರೆ! ಫಾದರ್ ಜೆರಾಲ್ಡ್ ಲೋಬೊ, ತಾಲೂಕು ಪಂಚಾಯತ್ ಸದಸ್ಯ ಸಮದ್ ಅಡ್ಯಾರ್, ಪಾವೂರು ಗ್ರಾಮ ಪಂಚಾಯತ್ ಸದಸ್ಯ ವಿವೇಕ್ ರೈ ಹಾಗೂ ಕಿನ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply