Header Ads
Header Ads
Breaking News

ನೆಲಮಂಗಲದಲ್ಲಿ ಭೀಕರ ಅಪಘಾತ. ಕಟೀಲು ಅರ್ಚಕನ ಪುತ್ರ ಸೇರಿ ಇಬ್ಬರು ಮೃತ್ಯು

ನೆಲಮಂಗಲ ಸಮೀಪದ ತಾವರೆಕೆರೆ ಬಳಿ ಕಾರು ಲಾರಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಶ್ರೀನಿಧಿ ಅಸ್ರಣ್ಣ ಮತ್ತು ತುಮಕೂರು ಮೂಲದ ಪ್ರಜ್ವಲ್ ಮೃತಪಟ್ಟಿದ್ದಾರೆ.ತುಮಕೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿತ್ತು. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.    ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಶ್ರೀನಿಧಿ ಅಸ್ರಣ್ಣ ಮತ್ತು ಪ್ರಜ್ವಲ್ ಇನ್ನಿಬ್ಬರು ಸ್ನೇಹಿತರೊಂದಿಗೆ ಪ್ರಾಜೆಕ್ಟ್ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿಗೆ ತೆರಳಿದ್ದರು. ಅವರ ಕಾರು ಮೊದಲು ಲಾರಿಗೆ, ಬಳಿಕ ಬಸ್ಸಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಕಾರು ಜಖಂಗೊಂಡಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply