Header Ads
Breaking News

ನೆಲ್ಲಿಕಟ್ಟೆ ಶಾಲೆಯಲ್ಲಿ ಗ್ರಾಮೋತ್ಸವ ಮತ್ತು ವನಮಹೋತ್ಸವ

ಪುತ್ತೂರು: ಸ್ವಾರ್ಥತೆಯಿಂದ ಪ್ರಸ್ತುತ ನೆಲ-ಜಲ ವ್ಯರ್ಥವಾಗಿ ಮನುಷ್ಯ ವಿನಾಶಕ್ಕೆ ದಾರಿ ಮಾಡಿಕೊಡುತ್ತಿದ್ದಾನೆ. ಈ ನಿಟ್ಟಿನಲ್ಲಿ ಸ್ವಾರ್ಥ ಬಿಟ್ಟು ಸಮಾಜ ನೆಲ-ಜಲದ ಬಗ್ಗೆ ಚಿಂತನೆ ನಡೆಸಬೇಕಾದ ಅಗತ್ಯವಿದೆ ಎಂದು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಹೇಳಿದರು.

ಅವರು ನೆಲ್ಲಿಕಟ್ಟೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಡಿಯೂರು ಗುರುದೇವ ಸೇವಾ ಬಳಗ, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ವತಿಯಿಂದ ಒಡಿಯೂರು ಗ್ರಾಮವಿಕಾಸ ಯೋಜನೆ ಸಹಕಾರದೊಂದಿಗೆ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಜನ್ಮ ದಿನೋತ್ಸವದ ಅಂಗವಾಗಿ ಗ್ರಾಮೋತ್ಸವ ಹಾಗೂ ವನಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಒಡಿಯೂರು ಗುರುದೇವ ಸೇವಾ ಬಳದ ಗೌರವಾಧ್ಯಕ್ಷ ದೇವಪ್ಪ ನೋಂಡಾ ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಪನ್ಮೂಲ ಕೇಂದ್ರದ ಕಾರ್ಯದರ್ಶಿ ಅಬೂಬಕ್ಕರ್ ಆರ್ಲಪದವು, ಸ್ಥಳೀಯರಾದ ಗಣೇಶ್, ಗುರುದೇವ ಸೇವಾ ಬಳಗದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಮುಖ್ಯ ಶಿಕ್ಷಕಿ ಧನಲಕ್ಷ್ಮೀ ಪಾಲ್ಗೊಂಡು ಶುಭ ಹಾರೈಸಿದರು.
ಶಿಕ್ಷಕಿ ಮೀನಾಕ್ಷಿ ಸ್ವಾಗತಿಸಿದರು. ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಉಪಾಧ್ಯಕ್ಷೆ, ನ್ಯಾಯವಾದಿ ಹರಿಣಾಕ್ಷಿ ಜೆ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *