
ದ.ಕ. ಜಿಲ್ಲಾಡಳಿತದಿಂದ 72ನೆ ಗಣರಾಜ್ಯೋತ್ಸವು ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ನಡೆಯಿತು. ಧ್ವಜಾರೋಹಣಗೈದು ಗಣರಾಜ್ಯೋತ್ಸವದ ಸಂದೇಶ ನೀಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಜನಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿವೆ. ಆ ಪೈಕಿ ದೇಶದ ಮೊದಲ ಕೋಸ್ಟ್ಗಾರ್ಡ್ ಅಕಾಡಮಿಯು ಬಜ್ಪೆ ಕೆಂಜಾರಿನಲ್ಲಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ಕೇಂದ್ರ ಸರಕಾರವು 1 ಸಾವಿರ ಕೋ.ರೂ. ಅನುದಾನ ಬಿಡುಗಡೆ ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ,ಪೊಲೀಸ್ಆಯುಕ್ತ ಶಶಿಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮತ್ತಿತರರು ಉಪಸ್ಥಿತರಿದ್ದರು
. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ಆಚರಣೆ ಸರಳವಾಗಿ ನಡೆಯ್ತು. ಇದೇ ವೇಳೆ ಪರೇಡ್ ವೀಕ್ಷಣೆ, ಗೌರವ ಸ್ವೀಕಾರ, ನಾಡಗೀತೆ, ಪಥಸಂಚಲನ ನಡೆಯ್ತು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.