Header Ads
Header Ads
Breaking News

ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ| ಗಣೇಶ್ ಕಾರ್ಣಿಕ್

ಪದವೀಧರರು ಮತ್ತು ಶಿಕ್ಷಕರು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಹಾಗಾಗಿ ಈ ಎರಡೂ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಾಣೆಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸುತ್ತ ಬಂದಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದೆ. ಎಂದು ಉಡುಪಿಯಲ್ಲಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.ಅವರು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರದಿಂದ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗಿರುವ ಕ್ಯಾ| ಗಣೇಶ್ ಕಾರ್ಣಿಕ್ ವಿಧಾನಪರಿಷತ್ ಸದಸ್ಯನಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಬಿಜೆಪಿ ಶಿಕ್ಷಕರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಡಾ| ವಿ.ಎಸ್. ಆಚಾರ್ಯ ಅವರ ಮುಂದಾಳತ್ವದಲ್ಲಿ ಶಿಕ್ಷಕರ ಅನೇಕ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದರು. ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಯಶ್ಪಾಲ್ ಸುವರ್ಣ, ಪ್ರಭಾಕರ ಪೂಜಾರಿ, ರಾಘವೇಂದ್ರ ಕಿಣಿ, ಜಗದೀಶ್ ಆಚಾರ್ಯ, ಗಿರೀಶ್ ಅಂಚನ್ ಉಪಸ್ಥಿತರಿದ್ದರು.

 

Related posts

Leave a Reply