Header Ads
Header Ads
Breaking News

ನ್ಯಾಷನಲ್ ಮೆಡಿಕಲ್ ಕಮಿಷನ್ ಬಿಲ್‌ಗೆ ಗ್ರಾಹಕ ರಕ್ಷಣಾ ಮಸೂದೆ 2018ಕ್ಕೆ ವಿರೋಧ

ಕೇಂದ್ರ ಸರಕಾರವು ಜಾರಿಗೊಳಿಸಲು ಉದ್ದೇಶಿಸಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಬಿಲ್ 2017-18 ಮತ್ತು ಗ್ರಾಹಕ ರಕ್ಷಣಾ ಮಸೂದೆ 2018 ನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು ಇಂದು ಅಖಿಲ ಭಾರತ ವಿರೋಧ ದಿನವನ್ನಾಗಿ ಆಚರಿಸುತ್ತಿದೆ ಎಂದು ಪುತ್ತೂರು ಘಟಕದ ಅಧ್ಯಕ್ಷ ಗಣೇಶ್ ಪ್ರಸಾದ್ ಮುದ್ರಾಜೆ ಹೇಳಿದರು.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸ್ತಾವಿತ ನ್ಯಾಷನಲ್ ಮೆಡಿಕಲ್ ಕಮಿಷನ್ ಮಸೂದೆ ಪ್ರಜಾಪ್ರಭುತ್ವ ವಿರೋಧಿ, ಒಕ್ಕೂಟ ವ್ಯವಸ್ಥೆಗೆ ವಿರೋಧಿ , ಬಡವರ ವಿರುದ್ಧವಾಗಿದ್ದು, ಶ್ರೀಮಂತರ ಪರವಾಗಿದೆ. ಪ್ರಾಧಿಕಾರ ಮತ್ತು ಅಧಿಕಾರವನ್ನು ಸಂಪೂರ್ಣವಾಗಿ ಕೇಂದ್ರೀಕರಿಸುವ ಒಳ ಸಂಚನ್ನು ಈ ಸೂದೆ ಹೊಂದಿದೆ ಎಂದ ಆರೋಪಿಸಿದ ಅವರು ಆಡಳಿತವನ್ನು ಸಂಪೂರ್ಣವಾಗಿ ಕೇಂದ್ರ ಸರಕಾರದ ಅಧೀನಕ್ಕೆ ತೆಗೆದುಕೊಳ್ಳುವ ಹುನ್ನಾರ ಇದರ ಹಿಂದಿದೆ ಎಂದರು.

Related posts

Leave a Reply