Header Ads
Header Ads
Breaking News

ನ.17ರಂದು ಸುಳ್ಯದಲ್ಲಿ ಅಖಿಲ ಭಾರತ 65ನೇ ಸಹಕಾರ ಸಪ್ತಾಹ

ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕು ಲ್ಯಾಂಪ್ ಸಹಕಾರ ಸಂಘ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲ ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳುರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮಂಗಳುರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ೬೫ನೇ ಸಹಕಾರ ಸಪ್ತಾಹ -2018 ಕಾರ್ಯಕ್ರಮವು ನ.17ರಂದು ಸುಳ್ಯ ಅಂಬಟೆಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ರೈ ಉಬರಡ್ಕ ಸುದ್ದಿಗೋಷ್ಟಿಯನ್ನು ಹೇಳಿದರು.

ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೋ ಮಾಜಿ ನಿರ್ದೇಶಕ ರಾಧಾಕೃಷ್ಣ ಕೋಟೆ ವಿಷಯ ಮಂಡನೆ ಮಾಡಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಹಕಾರಿ ಯೂನಿಯನ್ ಉಪಾಧ್ಯಕ್ಷ ವಿಷ್ಣು ಭಟ್ ಬಿ., ಕಾರ್ಯದರ್ಶಿ ವೆಂಕಟ್ರಮಣ ಮುಳ್ಯ, ಕೋಶಾಧಿಕಾರಿ ಪ್ರಭಾಕರ ನಾಯಕ್ ಬಿ, ಸೀತಾನಂದ ಬೇರ್ಪಡ್ಕ ಪಸ್ಥಿತರಿದ್ದರು.

Related posts

Leave a Reply