Header Ads
Header Ads
Breaking News

ನ.3ರಂದು ಶಾಸಕರ ನೇತೃತ್ವದಲ್ಲಿ ಸುಳ್ಯದಲ್ಲಿ ಧರಣಿ ಸತ್ಯಾಗ್ರಹ

ಕಳೆದೆರಡು ವರ್ಷಗಳಿಂದ ದ.ಕ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮರಳಿನ ಸಮಸ್ಯೆ ಎದುರಾಗಿದ್ದು, ಸರಕಾರಿ ವಸತಿ ಯೋಜನೆಗಳ ನಿರ್ಮಾಣ ಮತ್ತು ವಿವಿಧ ಕಾಮಗಾರಿಗಳ ಕೆಲಸ ಕುಂಠಿತಗೊಂಡಿದೆ. ಕಾರ್ಮಿಕರು, ಗುತ್ತಿಗೆದಾರರು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಮರುಳು ನೀತಿಯ ವಿರುದ್ದ ಶಾಸಕರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನ. 3 ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಲಿದೆ ಎಂದು ಶಾಸಕ ಎಸ್. ಅಂಗಾರ ಹೇಳಿದರು. 

ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮರಳು ನೀತಿಯ ವಿರುದ್ದ 5 ಬಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು ಇದುವರೆಗಿನ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿಂದೆ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡಿದಾಗಲೂ ಮರಳಿನ ಸಮಸ್ಯೆ ಬಗೆಹರಿಸುವಂತೆ ವಿನಂತಿಸಿದ್ದೇವೆ. ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಸಂಬಂಧಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಬಿ.ಜೆ.ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಎ.ಪಿ.ಎಂ.ಸಿ ಅಧ್ಯಕ್ಷ ದೇರಣ್ಣ ಗೌಡ, ನ.ಪಂ ಅಧ್ಯಕ್ಷೆ ಶೀಲಾವತಿ ಮಾಧವ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಸುಭೋದ್ ಶೆಟ್ಟಿ ಮೇನಾಲ, ಹರೀಶ್ ಉಬರಡ್ಕ ಉಪಸ್ಥಿತರಿದ್ದರು.

Related posts

Leave a Reply