Header Ads
Header Ads
Breaking News

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಹಿನ್ನೆಲೆ : ಮಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಿದ್ರು. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ರು. ಇನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು. ಈ ವೇಳೆ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಜನತೆ ವಿಶ್ವಾಸ ಕಳೆದುಕೊಂಡಿದ್ದಾರೆ. ಬಿಜೆಪಿ ದುರಾಡಳಿತ ವಿರುದ್ಧ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.ಈ ವೇಳೆ ಯುವ ಮೋರ್ಚಾ ಅಧ್ಯಕ್ಷ ಮಿಥುನ್ ರೈ, ಕಾಂಗ್ರೆಸ್ ಮುಖಂಡರಾದ ಕೋಡಿಜಾಲ್ ಇಬ್ರಾಹಿಂ ,ಶಶಿಧರ್ ಹೆಗ್ಡೆ, ಸುರೇಶ್ ಬಲ್ಲಾಳ್, ಸೇರಿದಂತೆ ಮತ್ತಿತರರು ಉಪಸ್ಥಿತಿರಿದ್ದರು.

Related posts

Leave a Reply