Header Ads
Header Ads
Breaking News

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹಿನ್ನೆಲೆ : ಬಿ.ಸಿ ರೋಡ್‌ನಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

ಬಂಟ್ವಾಳ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಬಿ.ಸಿ.ರೋಡು ಜಂಕ್ಷನ್‌ನಲ್ಲಿ ಸಂಭ್ರಮ ಆಚರಿಸಲಾಯಿತು. ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ನಾಯಕರಿಗೆ ಜೈಕಾರ ಹಾಕಿದರು. 

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಭೂರ್ವ ಗೆಲುವು ಸಾಧಿಸಿರುವುದು ಬಿಜೆಪಿ ಮುಕ್ತ ಭಾರತ ನಿರ್ಮಾಣವಾಗುವತ್ತ ಸಾಗುತ್ತಿದೆ ಎಂದರು. ಮುಂದಿನ ಲೋಕಸಭಾ ಚುನಾವಣೆಗೆ ಈ ಗೆಲುವು ದಿಕ್ಸೂಚಿಯಾಗಲಿದ್ದು ಕೇಂದ್ರ ಸರಕಾರದ ಜನ ವಿರೋಧಿ ನೀತಿಯಿಂದ ಬೇಸತ್ತು ಜನ ಕಾಂಗ್ರೆಸನ್ನು ಗೆಲ್ಲಿಸಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ಅಂಬಾನಿ, ಅದಾನಿಯಂತಹ ಬಂಡವಾಳ ಶಾಹಿಗಳಿಗೆ ಪ್ರಯೋಜನವಾಗಿದಯೇ ವಿನಃ ಜನ ಸಾಮಾನ್ಯರಿಗೆ ಏನು ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ಪಂಚರಾಜ್ಯಗಳ ವಿಧಾನಪರಿಚತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದೇಶದ ಜನರಿಗೆ ಕಾಂಗ್ರೆಸ್ ಅನಿವಾರ್ಯ ಎಂಬುದನ್ನು ತೋರಿಸಿಕೊಟ್ಟಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಮಂಜುಳಾ ಮಾವೆ ಪಕ್ಷ ಪ್ರಮುಖರಾದ ಬೇಬಿ ಕುಂದರ್ ಸುದೀಪ್ ಶೆಟ್ಟಿ, ಅಬ್ಬಾಸ್ ಅಲಿ, ಸದಾಶಿವ ಬಂಗೇರಾ, ಯೂಸುಫ್ ಕರಂದಾಡಿ, ಗಂಗಾಧರ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ವೆಂಕಪ್ಪ ಪೂಜಾರಿ, ಪದ್ಮನಾಭ ರೈ, ಮಧುಸೂದನ್ ಶೆಣೈ, ಮಹಮ್ಮದ್ ನಂದರಬೆಟ್ಟು ಮತ್ತಿತರ ಪ್ರಮುಖರು ಹಾಜರಿದ್ದರು.

Related posts

Leave a Reply