Header Ads
Header Ads
Breaking News

ಪಂಪ್‌ವೆಲ್-ತೊಕ್ಕೊಟ್ಟು ಫ್ಲೈ ಓವರ್ ಕಾಮಗಾರಿ ವಿಳಂಬ ತುಳುನಾಡ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ-66 ಪಂಪ್‌ವೆಲ್ ಹಾಗೂ ತೊಕ್ಕೊಟ್ಟು ಫ್ಲೈ ಓವರ್ ಕಾಮಗರಿಯ ವಿಳಂಬ ಅಸಮರ್ಪಕ ಹಾಗೂ ಅವೈಜ್ಞಾನಿಕ ಕಾಮಗಾರಿ ಮತ್ತು ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಪಂಪ್‌ವೆಲ್ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಪಂಪ್‌ವೆಲ್- ತೊಕ್ಕೊಟ್ಟು ಫ್ಲೈ ಓವರ್ ಕಾಮಗಾರಿ ಆರಂಭವಾಗಿ 8 ವರ್ಷಗಳೇ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ತಲಪಾಡಿಯಿಂದ ಕುಂದಾಪುರ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಬಹತೇಕ ಮುಗಿದಿದ್ದು, ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಪ್ಲೈ ಓವರ್ ಕಾಮಗಾರಿ ಕುಂಟುತ್ತಾ ಸಾಗಿದೆ ಎಂದು ಹೇಳಿದರು. ಕಾಮಗಾರಿ ವಿಳಂಬಕ್ಕೆ ಕಾರಣವಾಗಿತ್ತು ಗುತ್ತಿಗೆ ಸಂಸ್ಥೆ ನವಯುಗ ಕನ್‌ಸ್ಟ್ರಕ್ಷನ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಖಂಡನೀಯ ಎಂದು ಹೇಳಿದರು.ಈ ಸಂದರ್ಭ ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು

Related posts

Leave a Reply