Header Ads
Header Ads
Breaking News

ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ .ಕುಂದಾಪುರದಲ್ಲಿ ಸನ್ಮಾನ ಸ್ವೀಕರಿಸಿ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ.

ಕುಂದಾಪುರ: ಪಕ್ಷದ ಕಚೇರಿಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಕೊಟ್ಟಿರುವ ಈ ಪ್ರೀತಿ ಮತ್ತು ಗೌರವ ನನ್ನ ಜೀವನದಲ್ಲಿ ಬಹುದೊಡ್ಡ ಗೌರವ ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕುಂದಾಪುರಕ್ಕೆ ಆಗಮಿಸಿದ ಅವರನ್ನು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡರು ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಕೋಟ, ಈ ಹಿಂದೆ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಆಡಳಿತ ಪಕ್ಷಗಳ ಜನವಿರೋಧಿ ನೀತಿಗಳನ್ನು ವಿರೋಧಿಸುತ್ತಾ ಸಭಾತ್ಯಾಗ ಮಾಡಿ ಗಲಾಟೆ ಮಾಡಿಕೊಂಡೆ ಬಂದಿದ್ದೇನೆ. ಹಾಗಾಗಿ ಈ ರಾಜಕಾರಣದಲ್ಲಿ ಖಾಯಂ ವಿರೋಧ ಮಾಡಿದರೆ ಕರ್ನಾಟಕ ರಾಜ್ಯದಲ್ಲಿ ವಿರೋಧ ಪಕ್ಷ ನಾಯನಕನಾಗಲಿಕ್ಕೆ ಸಾಧ್ಯವಿದೆ ಎಂದು ಹಾಸ್ಯಭರಿತವಾಗಿ ಹೇಳಿದರು.ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಕೋಟ ಶ್ರೀನಿವಾಸ ಪೂಜಾರಿಯವರು ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವುದು ಸಂತಸದ ವಿಚಾರ. ಓರ್ವ ವಿರೋಧಪಕ್ಷದ ನಾಯಕನಾದವನಿಗೆ ಬಹಳಷ್ಟು ಜವಾಬ್ದಾರಿಗಳಿವೆ. ಆಡಳಿತ ಸರ್ಕಾರವನ್ನು ತಿದ್ದವಂತಹ ಕೆಲಸ ಮಾಡಬೇಕು. ಕೋಟ ಶ್ರೀನಿವಾಸ ಪೂಜಾರಿಯವರು ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸಮಾಡುತ್ತಾರೆ ಎಂಬ ಆತ್ಮವಿಶ್ವಾಸ ನಮಗಿದೆ ಎಂದರು.ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್ ಸುವರ್ಣ, ಭಾಸ್ಕರ ಬಿಲ್ಲವ, ಗೋಪಾಲ ಕಳಿಂಜೆ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply