Header Ads
Header Ads
Breaking News

ಪಜೀರು ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಆತ್ಮವಿಶ್ವಾಸ ಬೆಳೆಸುವ ಕೆಲಸ ರಾಜ್ಯ ಸರಕಾರದಿಂದ ಆಗಿದೆ ಸಚಿವ ಯು.ಟಿ. ಖಾದರ್ ಹೇಳಿಕೆ

ಉಳ್ಳಾಲ: ಮಕ್ಕಳೊಡನೆ ಧೈರ್ಯದಿಂದ ಸ್ವಾಭಿಮಾನದಿಂದ ಸ್ವಂತ ಮನೆ ಎಂದು ಹೇಳುವ ಆತ್ಮವಿಶ್ವಾಸ ಬೆಳೆಸುವ ಕೆಲಸ ರಾಜ್ಯ ಸರಕಾರದಿಂದ ಹಕ್ಕುಪತ್ರ ನೀಡುವ ಮೂಲಕ ಆಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.ಅವರು ಪಜೀರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪಂಚಾಯತ್ ಸಭಾಭವನದಲ್ಲಿ ಜರಗಿದ 94 ಸಿ ಸಿ ಹಕ್ಕು ಪತ್ರಗಳ ವಿತರಣಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ಹಿಂದಿನ ಸರಕಾರಗಳು ಯಾವುದೇ ರೀತಿಯ ಜನಪರ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಹಕ್ಕುಪತ್ರ ನೀಡಲು ಅನುದಾನದ ಅಗತ್ಯವಿದೆಯೇ? ವಿಳಂಬವಾಗಲು ಕಾರಣ ಏನು ಎಂಬುದನ್ನು ಆತ್ಮ ವಿಮರ್ಶೆ ಮಾಡಬೇಕಿದೆ. ಅಧಿಕಾರ ಹಂಚುವಲ್ಲಿಯೇ ಮಗ್ನರಾಗಿದ್ದರು. ಯೋಜನೆಯಲ್ಲಿ ತಾರತಮ್ಯ ಮಾಡಿಲ್ಲ. ಮನೆಗೆ ಕೆಲಸ ಕೇಳಿಕೊಂಡು ಬಂದವರಲ್ಲಿ ಧರ್ಮ, ಪಕ್ಷ ಕೇಳದ ಕೆಲಸ ನಿರ್ವಹಿಸಿ ಕೊಟ್ಟಿದ್ದೇನೆ ಎಂದು ಹೇಳಿದರು.ಈ ಸಂದರ್ಭ ಪಂಚಾಯತ್ ಅಧ್ಯಕ್ಷ ಸೀತಾರಾಮ ಶೆಟ್ಟಿ, ಉಪಾಧ್ಯಕ್ಷ ಜ್ಯೋತಿ ಪದ್ಮನಾಭ ಪೂಜಾರಿ, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಜಿ.ಪಂ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ, ಮುಂತಾದವರು ಉಪಸ್ಥಿತರಿದ್ದರು.
ವರದಿ: ಆರೀಫ್ ಉಳ್ಳಾಲ

Related posts

Leave a Reply