Header Ads
Breaking News

ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಾಲನೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ ಆರಂಭಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಾಲನೆ ನೀಡುವ ಕಾರ್ಯಕ್ರಮವು ನಗರದ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ ನಡೆಯಿತು.
ಪ್ರವಾಸೋದ್ಯಮ ಸಚಿವ ಸಿಪಿ ಯೋಗೀಶ್ವರ್ ಅವರು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪತ್ರಕರ್ತರು ಸ್ವಾಬಿಮಾನದಲ್ಲಿ ಬದುಕುತ್ತಾರೆ. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನನ್ನ ಪೂರ್ಣ ಸಹಕಾರ ಇದೆ. ಬಹಳಷ್ಟು ಪತ್ರಕರ್ತರು ಜನೋಪಯೋಗಿ, ಸಮಾಜಮುಖಿ ಕೆಲಸಗಳನ್ನು ಮಂಗಳೂರಿನ ಪತ್ರಕರ್ತ ಮಿತ್ರರು ಮಾಡಿದ್ದಾರೆ. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಬಹಳಷ್ಟು ಮಂದಿ ಕೊಡುಗೆಯನ್ನು ನೀಡಲಿ ಎಂದು ಹೇಳಿದರು.

ಆನಂತರ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್ ಅವರು ಮಾತನಾಡಿ, ಕೋವಿಡ್ ಬಳಿಕ ಶೇ.50ರಷ್ಟು ಪತ್ರಕರ್ತರು ಕೆಲಸ ಕಳೆದುಕೊಂಡಿದ್ದಾರೆ. ಕಷ್ಟದ ಸಂದರ್ಭದಲ್ಲಿ ಇಂತಹ ನಿಧಿಗೆ ಚಾಲನೆ ನೀಡುವುದು ಅಗತ್ಯವಾಗಿದೆ ಎಂದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ.ಗಳ ಕೊಡುಗೆಯನ್ನು ಘೋಷಿಸಿದರು.

ಇದೇ ಸಂದರ್ಭ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *