Header Ads
Breaking News

ಪತ್ರಕರ್ತರ ಗ್ರಾಮವಾಸ್ತವ್ಯ ಕುರಿತು ಸುಳ್ಯದಲ್ಲಿ ಪೂರ್ವಭಾವಿ ಸಭೆ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಡಿ.22 ರಂದು ಮಡಪ್ಪಾಡಿಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಎಲ್ಲಾ ಇಲಾಖೆಯ ಅಧಿಕಾರಿಗಳು ಫಲಪ್ರದವಾಗುವಂತೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್ ಖಡಕ್ ಸೂಚನೆ ನೀಡಿದ್ದಾರೆ.ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಸುಳ್ಯದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ ಅವರು ಇದೊಂದು ಖಾಸಾಗಿ ಕಾರ್ಯಕ್ರಮ ಎಂಬ ನೆಲೆಯಲ್ಲಿ ನೋಡದೆ ಸರಕಾರಿ ಕಾರ್ಯಕ್ರಮ ಎನ್ನುವ ರೀತಿಯಲ್ಲಿ ಅಧಿಕಾರಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ರಮ ನಮಗೆ ನೆಮ್ಮೆ, ಅದೇ ರೀತಿ ಎಲ್ಲಾ ಅಧಿಕಾರಿಗಳು ಹೆಮ್ಮೆಯಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಇಲಾಖೆಯ ಕಾರ್ಯಕ್ರಮಗಳನ್ನು ಜನಪ್ರಿಯಗೊಳಿಸಲು ಇದೊಂದು ಉತ್ತಮ ವೇದಿಕೆ. ಹಾಗಾಗಿ ಎಲ್ಲಾ ಇಲಾಖೆಗಳು ತಮ್ಮ ಸ್ಟಾಲ್‌ಗಳನ್ನು ತೆರೆದು ಜನರಿಗೆ ಮಾಹಿತಿ ನೀಡುವ ಅಧಿಕಾರಿಗಳು ಮಾಡಬೇಕು ಎಂದು ಸೂಚನೆ ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯದ ಸಿದ್ದತೆಯ ಕುರಿತು ಮಾಹಿತಿಗಳನ್ನು ಕಲೆಹಾಕಿದ ಅವರು ಜನರು ಕಚೇರಿಗೆ ಬಂದು ತಮ್ಮ ಅರ್ಜಿಗಳನ್ನು ಸಲ್ಲಿಸುವ ಮನಸ್ಥಿತಿಗೂ, ನಾವು ಹೋಗಿ ಅವರ ಸ್ವಂತ ಊರಿನಲ್ಲಿ ಮನವಿಗಳನ್ನು ಸ್ವೀಕರಿಸುವ ಮನಸ್ಥಿತಿಗಳಿಗೆ ವ್ಯತ್ಯಾಸಗಳಿರುತ್ತದೆ. ಇದನ್ನು ಇಲಾಖೆಯ ಅಧಿಕಾರಿಗಳು ಗಮನಿಸಬೇಕು. ನಾಗರಿಕ ಸ್ನೇಹಿ ವರ್ತನೆಯೊಂದಿಗೆ ಇಲಾಖೆಯ ಗೌರವ ಕಾಪಾಡಿಕೊಳ್ಳಬೇಕು. ಎಲ್ಲಾ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮುಂಚಿತವಾಗಿ ಮಡಪ್ಪಾಡಿಗೆ ತೆರಳಿ ಪರಿಶಿಲನೆ ನಡೆಸಬೇಕು ಎಂದು ಸೂಚಿಸಿದ ಎ.ಸಿ ಯವರು ತಾನು ಹಾಗೂ ತಹಶೀಲ್ದಾರ್ ಗುರುವಾರ ಮಡಪ್ಪಾಡಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಮಡಪ್ಪಾಡಿ ಗ್ರಾಮ ಅರಣ್ಯ ಪ್ರದೇಶಗಳಿಂದ ಕೂಡಿದ್ದರಿಂದ ಹಲವು ಸಮಸ್ಯೆಗಳಿರುವುದನ್ನು ಇಲಾಖೆಗಳು ಗಮನಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಆಹಮ್ಮದ್ ಕಾರ್ಯಕ್ರಮದ ಯಶಸ್ವಿಗೆ ಪೂರಕ ಮಾಹಿತಿಗಳನ್ನು ನೀಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಸ್ವರೂಪದ ಕುರಿತು ವಿವಿರ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್, ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯನ್ನು ಸಹಾಯಕ ಕಮಿಷನರ್ ಬಿಡುಗಡೆಗೊಳಿಸಿದರು.

Related posts

Leave a Reply

Your email address will not be published. Required fields are marked *