Header Ads
Header Ads
Breaking News

ಪರಿಸರ ಬೆಳೆಸುವ ನಿಟ್ಟಿನಲ್ಲಿ ಗಿಡ ನೆಡುವ ಕಾರ್ಯಕ್ರಮ

ಹಲವು ರೀತಿಯ ಸಮಾಜ ಮುಖಿ ಕೆಲಸಗಳನ್ನ ಮಾಡುತ್ತಾ ಬರುತ್ತಿರುವ ರಿಷಿ ಸಾಮಾಜಿಕ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತೊಂದು ಕಾರ್ಯಕ್ರಮವನ್ನು ನಡೆಸಿದೆ. ಪರಿಸರ ಬೆಳೆಸುವ ನಿಟ್ಟಿನಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಲೆಂಗಲ್ಲು ದೇವಸ್ಥಾನದ ಪರಿಸರದಲ್ಲಿ ಇತ್ತೀಚೆಗೆ ನಡೆಯಿತು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ರಿಷಿ ಸಾಮಾಜಿಕ ಸಾಂಸ್ಕೃತಿಕ ಪ್ರತಿಷ್ಠಾನ ಗಿಡ ನೆಡುವ ಕಾರ್ಯಕ್ರಮಕ್ಕೆ ಮುಂದಾಗಿದೆ.ಪ್ರಗತಿಪರ ಕೃಷಿಕ ಸಂಪತ್ ಕುಮಾರ್ ಕೊಲ್ಲಾಜೆ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಇನ್ನು ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜಗದೀಶ್ ಪಡ್ಪು ಮಾತನಾಡಿ , ಕಳೆದ ಹಲವು ವರ್ಷಗಳಿಂದ ಸಂಸ್ಥೆಯು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇದರ ಜತೆಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ನಿರ್ವಹಿಸುವುತ್ತಿರುವುದು ಶ್ಲಾಘನೀಯ ಎಂದರು.

 

ಪದ್ಮುಂಜ ಶಾಲೆಯ ಮುಖ್ಯೋಪಾಧ್ಯಾಯಿನಿ ಗಿರಿಜಾ ಮಾತನಾಡಿ, ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಕಳೆದ ಮೂರು ವರ್ಷಗಳಿಂದ ಭಾಗವಹಿಸುತ್ತಿದ್ದು, ಇದರ ಎಲ್ಲ ಕಾರ್ಯ ಚಟುವಟಿಕೆಗಳನ್ನು ಹತ್ತಿರದಿಂದ ಕಂಡಿದ್ದೇನೆ. ಗಿಡ ನೆಡುವುದಷ್ಟೇ ಅಲ್ಲ ಅದರ ಸಂರಕ್ಷಣೆಯ ಜವಾಬ್ದಾರಿಯನ್ನೂ ಸಂಸ್ಥೆ ವಹಿಸಿರುವುದು ಮಾದರಿ ಎಂದರು.ಈ ವೇಳೆ ಕಣಿಯೂರು ಗ್ರಾಮ ಪಂಚಾಯಿತಿ ಸದಸ್ಯ ಸೀತಾರಾಮ ಮಡಿವಾಳ, ಶಿಕ್ಷಕ ಸದಾಶಿವ, ಸಂಸ್ಥೆಯ ಅಧ್ಯಕ್ಷ ದಿವಾಕರ ಪದ್ಮುಂಜ, ದಿನೇಶ್ ಶೆಟ್ಟಿ ಮಲೆಂಗಲ್ಲು, ಚಂದ್ರಕಾಂತ ಮಲೆಂಗಲ್ಲು, ಕುಂಞ ಮೂಲ್ಯ, ರಮಾನಂದ , ಪ್ರತಿಷ್ಠಾನದ ಕಾರ್ಯದರ್ಶಿ ವಿಶ್ವನಾಥ ಪದ್ಮುಂಜ , ಪೃಥ್ವಿ ಜೆ ಪಡ್ಪು ಮೊದಲಾದವರು ಉಪಸ್ಥಿತರಿದ್ದರು.ಪರಿಸರದಲ್ಲಿ ೧೦೦ಕ್ಕಿಂತಲೂ ಅಧಿಕ ಗಿಡ ನೆಡಲಾಯಿತು. ೧೦೦ ಗಿಡಗಳನ್ನು ಸ್ಥಳೀಯರಿಗೆ ವಿತರಿಸಲಾಯತು.

Related posts

Leave a Reply