Header Ads
Breaking News

ಪಾಂಡೇಶ್ವರದ ಪೊಲೀಸ್ ಲೇನ್‌ನಲ್ಲಿ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಜಾಗೃತಿ ಕಾರ್ಯಕ್ರಮ

ಮಂಗಳೂರು ಸಿಟಿ ಪೊಲೀಸ್ ಹಾಗೂ ಎಜೆ ಇನ್ಸ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಇಂಡಿಯನ್ ಡೆಂಟಲ್ ಅಸೋಸಿಯೇಶನ್ ಹಾಗೂ ಇನ್ನಿತರ ಸಂಘಟನೆಗಳ ವತಿಯಿಂದ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ವಿರುದ್ದ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಂಗಳೂರಿನ ಪೊಲೀಸ್ ಲೇನ್‌ನಲ್ಲಿ ನಡೆಯಿತು. ಪೊಲೀಸರಿಗೆ ಹಾಗೂ ಅವರ ಕುಟುಂಬದವರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಭಾಗವಹಿಸಿದ್ರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಪೊಲೀಸರು ತಮ್ಮ ಒತ್ತಡದ ಜೀವನದಲ್ಲಿ ಆರೋಗ್ಯದ ಕಡೆಗೆ ಗಮನ ಹರಿಸೋದು ತುಂಬಾ ಕಡಿಮೆ. ಹೀಗಿರುವಾಗ ಎಜೆ ಸಂಸ್ಥೆ ಒಂದು ವಿಶೇಷವಾದ ಆರೋಗ್ಯದ ಬಗೆಗಿನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಉತ್ತಮ ಕೆಲಸ ಮಾಡಿದೆ ಎಂಬುದಾಗಿ ಶ್ಲಾಘಿಸಿದರು. ಈ ಸಂದರ್ಭ ಡಾ.ಮಂಜುನಾಥ ರೈ, ನಿಲಾನ್ ಶೆಟ್ಟಿ, ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಡಿಸಿಪಿ ಹನುಮಂತರಾಯ, ಡಾ. ಮಂಜುನಾಥ್, ಲಕ್ಷ್ಮೀ ಗಣೇಶ್, ಡಾ.ಶಿವಶರಣ್, ಪೊಲೀಸ್ ಅಧಿಕಾರಿಗಳು ಹಾಗೂ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *