Header Ads
Header Ads
Breaking News

ಪಾಕ್ ಯುದ್ಧ ವಿಮಾನಗಳಿಂದ ಬಾಂಬ್ ದಾಳಿ: ಮೂರು ವಿಮಾನ ಹೊಡೆದುರುಳಿಸಿದ ಭಾರತೀಯ ಸೇನೆ

ಭಾರತೀಯ ವಾಯು ಪಡೆ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮರುದಿನ ಪಾಕಿಸ್ತಾನದ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸಿದೆ. ಫೆ.27 ರಂದು ಬೆಳಿಗ್ಗೆ ಜಮ್ಮು-ಕಾಶ್ಮೀರದ ರಜೌರಿ ಹಾಗೂ ನೌಶೇರಾಗಳಲ್ಲಿ ವಾಯುಗಡಿಯನ್ನು ಉಲ್ಲಂಘನೆ ಮಾಡಿದ್ದು ಬಾಂಬ್ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಪಾಕಿಸ್ತಾನದ ಉಗ್ರರು ಭಾರತದ ವಿಮಾನಗಳನ್ನು ಹೈಜಾಕ್ ಮಾಡುವ ಸಾಧ್ಯತೆ ಇರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 
ಇನ್ನು ಶ್ರೀನಗರ, ಲೆಹ್, ಪಠಾಣ್ ಕೋಟ್ ಗಳಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Related posts

Leave a Reply

Your email address will not be published. Required fields are marked *