Header Ads
Header Ads
Breaking News

ಪಾಣೆಮಂಗಳೂರು: ಬಸ್ಸು- ಕಾಂಕ್ರೀಟ್ ಮಿಕ್ಸರ್ ಲಾರಿ ನಡುವೆ ಅಪಘಾತ

ಖಾಸಗಿ ಬಸ್ಸು ಹಾಗೂ ಕಾಂಕ್ರೀಟ್ ಮಿಕ್ಸರ್ ಲಾರಿಯ ನಡುವೆ ಅಪಘಾತ ನಡೆದ ಘಟನೆ ಪಾಣೆಮಂಗಳೂರಿನ ಸತ್ಯದೇವತಾ ಕಲ್ಲುರ್ಟಿ ದೇವಸ್ಥಾನದ ಬಳಿ ಶುಕ್ರವಾರ ರಾತ್ರಿ ನಡೆದಿದೆ.ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತುಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು.ಬಿ.ಸಿ.ರೋಡಿನಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರದ ಲಾರಿಗೆ ಓವರ್ ಟೇಕ್ ಮಾಡುವ ಬರದಲ್ಲಿ ಖಾಸಗಿ ಬಸ್ಸು ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಲಾರಿ ಮುಂದೆ ಚಲಿಸದೆ ರಸ್ತೆ ಮಧ್ಯೆಯೇ ಉಳಿದಿದ್ದು ಇತರ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಬಳಿಕ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಬೇರೆ ಬಸ್ಸಿನಲ್ಲಿ ಪ್ರಯಾಣಿಸ ಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿತು

Related posts

Leave a Reply