Header Ads
Header Ads
Breaking News

ಪಾಲಿಕೆ ವತಿಯಿಂದ ಮಲೇರಿಯಾ ರೋಗ ನಿಯಂತ್ರಣ, ಮಂಗಳೂರು ಮೇಯರ್ ಕವಿತಾ ಸನಿಲ್ ಸ್ಪಷ್ಟನೆ

ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕಳೆದ ಎರಡು ವರ್ಷಗಳಿಂದ ನಗರ ವ್ಯಾಪ್ತಿಯಲ್ಲಿ ಮಲೇರಿಯಾ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ಹೇಳಿದ್ದಾರೆ.
ಈ ಕುರಿತು ಪಾಲಿಕೆ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಅವರು, ಕಳೆದ ವರ್ಷ ೧,೭೧,೭೦೧ ಮಲೇರಿಯಾ ಪ್ರಕರಣಗಳು ಕಂಡುಬಂದಿದ್ದು, ೨೦೧೭ರ ಜನವರಿಯಿಂದ ಜೂನ್‌ತನಕ ೭೬,೫೩೭ ಪ್ರಕರಣಗಳು ಬೆಳಕಿಗೆ ಬಂದಿದೆ ಎಂದರು. ಈಗಾಗಲೇ ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣ ನಿಯಂತ್ರಿಸಲು ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳನ್ನು ಅತೀ ಸೂಕ್ಷ್ಮ ವಾರ್ಡ್‌ಗಳು, ಸೂಕ್ಷ್ಮ ವಾರ್ಡ್‌ಗಳು ಹಾಗೂ ಕಡಿಮೆ ಸೂಕ್ಷ್ಮ ವಾರ್ಡ್‌ಗಳಾಗಿ ವಿಂಗಡಿಸಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಉಪ ಮೇಯರ್ ರಜನೀಶ್, ಪಾಲಿಕೆ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ನಾಗವೇಣಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply