Header Ads
Breaking News

ಪಿಂಚಣಿದಾರರಿಗೆ ಬಾಕಿ ಇರುವ ಪಿಂಚಣಿ ತಕ್ಷಣ ಬಿಡುಗಡೆಗೊಳಿಸಿ : ಬೆಳ್ತಂಗಡಿಯಲ್ಲಿ ಎಸ್‍ಡಿಪಿಐನಿಂದ ಪ್ರತಿಭಟನೆ

ಬೆಳ್ತಂಗಡಿ :- ಪಿಂಚಣಿದಾರರಿಗೆ ಬಾಕಿ ಇರುವ ಪಿಂಚಣಿ ಹಣ ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನ ಸೌದ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಎಸ್‍ಡಿಪಿಐ ಬೆಳ್ತಂಗಡಿ ವಿಧಾನ ಸಭಾಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಹೈದರ್ ನೀರ್ಸಾಲ್, ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಪಿಎಫ್‍ಐ ಜಿಲ್ಲಾಧ್ಯಕ್ಷರಾದ ಮುಸ್ತಫಾ ಜಿ ಕೆ, ಎಸ್ ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಕ್ಬರ್ ಬೆಳ್ತಂಗಡಿ, ಎಸ್‍ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಉಪಾಧ್ಯಕ್ಷರಾದ ಶುಕೂರ್ ಕುಪ್ಪೆಟ್ಟಿ, ಎಸ್ಡಿಪಿಐ ನಗರ ಸಮಿತಿ ಅಧ್ಯಕ್ಷ ಫೈಝಲ್ ಐಜೆ ಇನ್ನಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *