Header Ads
Breaking News

ಆಗಸ್ಟ್ ತಿಂಗಳೊಳಗೆ ಪಿಂಚಣಿದಾರರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ : ಐವನ್ ಡಿಸೋಜಾ ಹೇಳಿಕೆ

ರಾಜ್ಯದೆಲ್ಲೆಡೆ ಕಂದಾಯ ಮತ್ತು ಪಿಂಚಣಿ ಅದಾಲತ್‌ಗಳನ್ನು ನಡೆಸಲಾಗಿದೆ. ಹೋಬಳಿ ಮಟ್ಟದಲ್ಲಿ ತಿಂಗಳಿಗೊಮ್ಮೆ ಕಡ್ಡಾಯವಾಗಿ ಕಂದಾಯ ಅದಾಲತ್‌ಗಳನ್ನು ನಡೆಸಲು ನಿರ್ದೇಶನ ಮಾಡಲಾಗಿದೆ. ಕರ್ನಾಟಕ ರಾಜ್ಯದಾದ್ಯಂತ ವಿಶೇಷ ಅದಾಲತ್‌ನ ಆಂದೋಲಗಳನ್ನು ನಡೆಸಬೇಕು ಎಂದು ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಹೇಳಿದರು.
ಅವರು ಮಂಗಳೂರಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ ಸಾರ್ವಜನಿಕರಿಂದ ಆಹವಾಲುಗಳನ್ನು ಸ್ವೀಕರಿಸಾಗಿದೆ. ಕೆಲವೊಂದು ಕಾನೂನು ತೊಡಕುಗಳನ್ನು ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದರು. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ 22,507 ಪಿಂಚಣಿಗಾರರನ್ನು ಗುರುತಿಸಿದ್ದೇವೆ. ಇನ್ನು ಎಷ್ಟೋ ಅರ್ಜಿಗಳು ಬಾಕಿ ಉಳಿದಿರಬಹುದು. ಅದಕ್ಕಾಗಿಯೇ ಆಗಸ್ಟ್ ತಿಂಗಳ ಒಳಗಾಗಿ ಹೋಬಳಿ ಮಟ್ಟದಲ್ಲಿ ಕಡ್ಡಾಯವಾಗಿ ಕಂದಾಯ ಅದಾಲತ್‌ಗಳನ್ನು ನಡೆಸಬೇಕು ಎಂದು ಹೇಳಿದರು. ವಿಶೇಷ ಆಂದೋಲದಲ್ಲಿ ಜನರು ಮತ್ತು ಜನಪ್ರತಿನಿಧಿಗಳು ಭಾಗವಹಿಸಬೇಕು ಮತ್ತು ನಮ್ಮ ಜಿಲ್ಲೆಯಲ್ಲಿರುವ ಎಲ್ಲಾ ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ತಿಳಿಸಬೇಕು ಎಂದು ಹೇಳಿದರು.

Related posts

Leave a Reply

Your email address will not be published. Required fields are marked *