Header Ads
Header Ads
Header Ads
Breaking News

ಪಿ‌ಎಫ್‌ಐ, ಎಸ್‌ಡಿಪಿ‌ಐ ಸಂಘಟನೆ ನಿಷೇಧಿಸುವಂತೆ ಆಗ್ರಹ ವಿಟ್ಲದಲ್ಲಿ ಬಿಜೆಪಿಯಿಂದ ರಾಜ್ಯಪಾಲರಿಗೆ ಮನವಿ

 

ಪಿ‌ಎಫ್‌ಐ ಹಾಗೂ ಎಸ್ಡಿಪಿ‌ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ, ವಿಟ್ಲ ನಗರ ಬಿಜೆಪಿ ವತಿಯಿಂದ ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ, ಹಾಗೂ ಸಂಘಪರಿವಾರದ ಕಾರ್ಯಕರ್ತರ ಹತ್ಯೆ ಹಾಗೂ ಹಲ್ಲೆ ಪ್ರಕರಣದಲ್ಲಿ ಪಿ‌ಎಫ್‌ಐ ಸಂಘಟನೆ ಭಾಗಿಯಾಗಿರುವುದು ಸಾಭಿತಾಗಿದೆ. ಇವುಗಳು ನಿಷೇಧಿತ ಸಿಮಿ ಸಂಘಟನೆಯ ಜೊತೆ ಸಂಪರ್ಕ ಹೊಂದಿದೆ ಎಂದು ದೂರಿದರು. ಅಲ್ಲದೆ ಸೆ.೭ ರಂದು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕರ್ನಾಟಕ ರಾಜ್ಯದ ೫ ವಿಭಾಗಗಳಿಂದ ಮಂಗಳೂರಿಗೆ ಬೈಕ್ ರ್ಯಾಲಿ ಮೂಲಕ ಮಂಗಳೂರು ಚಲೋ ಹಮ್ಮಿಕೊಂಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಅಧ್ಯಕ್ಷ ಮೋಹನದಾಸ ಉಕ್ಕುಡ, ಪ್ರಧಾನ ಕಾರ್ಯದರ್ಶಿ ಉದಯ ಆಲಂಗಾರು, ಕಾರ್ಯದರ್ಶಿ ಜಗದೀಶ್ ಪಾಣೆಮಜಲು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಜೇಶ್ ಬೊಬ್ಬೆಕೇರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ಎಂ.ವಿಟ್ಲ ಮತ್ತಿತ್ತರರು ಉಪಸ್ಥಿತರಿದ್ದರು.

Related posts

Leave a Reply