Header Ads
Header Ads
Breaking News

ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆ:ಕಾರ್ಯಕ್ರಮದಲ್ಲಿ ಗಣ್ಯರಿಗೆ ಸನ್ಮಾನ

ಬಂಟ್ವಾಳ : ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಂಘದ ಸ್ಥಾಪಕಾಧ್ಯಕ್ಷ ದಿ. ಪದ್ಮ ಮೂಲ್ಯ ಅನಿಲಡೆ ಅವರ ಸ್ಮರಣಾರ್ಥ ದ.ಕ., ಉಡುಪಿ, ಕಾಸರಗೋಡು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆಯನ್ನು ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಮತ್ತು ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಕಾರದೊಂದಿಗೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು.

ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸಂಘ ಸಂಸ್ಥೆಗಳ ಸಾಮಾಜಿಕ ಚಟುವಟಿಕೆಗಳಂತಹ ಸಮಾಜದ ಅಭಿವೃದ್ದಿ ಕಾರ್ಯಗಳಿಂದ ಊರಿಗೆ ಉತ್ತಮ ಹೆಸರು ಬರುತ್ತದೆ. ನಾಟಕ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಭಿನಂದಾರ್ಹರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುಂಜಾಲಕಟ್ಟೆ ಸ.ಹಿ.ಪ್ರಾ.ಶಾಲೆ ಮುಖ್ಯ ಶಿಕ್ಷಕ ಮೋನಪ್ಪ, ಉದಯೋನ್ಮುಖ ಪ್ರತಿಭೆ ಅಭಿನವ್ ಎಚ್.ಕೆ., ನಟ ಅನೀಶ್ ಅಮೀನ್ ಹಾಗೂ ದಿ. ಪದ್ಮ ಮೂಲ್ಯ ಅವರ ಮನೆಯವರನ್ನು ಸಮ್ಮಾನಿಸಲಾಯಿತು. ಬಳಿಕ ಶ್ರೀ ಗುರು ಕಲಾತಂಡ ಮುದರಂಗಡಿ ಇವರಿಂದ ವಾಸುದೇವೆರ್‍ನ ಜೋಕುಲು ನಾಟಕ ಪ್ರದರ್ಶನಗೊಂಡಿತು.

ಜಗಳೂರು ಚರ್ಚ್ ಧರ್ಮಗುರು ರೆ. ಫಾ. ವಿಲಿಯಂ ಮಿರಾಂಡ, ಜಿ.ಪಂ.ಸದಸ್ಯರಾದ ಬಿ.ಪದ್ಮಶೇಖರ ಜೈನ್, ಎಂ. ತುಂಗಪ್ಪ ಬಂಗೇರ, ಕಕ್ಯಪದವು ಗರಡಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಉದ್ಯಮಿ, ಸಿನಿಮಾ ನಿರ್ಮಾಪಕ ಹರೀಂದ್ರ ಪೈ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ದ.ಕ. ಜಿಲ್ಲಾ ಕಾರ್ಯನಿರತ ಪರ್ತಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ನಿವೃತ್ತ ಬ್ಯಾಂಕ್ ಅಧಿಕಾರಿ ವಿಟ್ಠಲ ಶೆಟ್ಟಿ ಮೈಸೂರ್, ಕಾಮಿಡಿ ಕಿಲಾಡಿ ನಟ ಅನೀಶ್ ಅಮೀನ್, ಉದ್ಯಮಿ ಓಂ ಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಸಂಘದ ಗೌರವಾಧ್ಯಕ್ಷ ಮೋಹನ ಸಾಲ್ಯಾನ್, ವನಿತಾ ಸಮಾಜದ ಅಧ್ಯಕ್ಷೆ ಆಶಾ ದಿನಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *