Header Ads
Breaking News

ಪುತ್ತೂರಿನಲ್ಲಿ ಎಸ್‍ಡಿಎಸಿಯು ವತಿಯಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಇಂಧನ ಅನಿಲ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್(ಎಸ್‍ಡಿಎಸಿಯು) ವತಿಯಿಂದ ಮಂಗಳವಾರ ಪುತ್ತೂರು ಬಸ್ ನಿಲ್ದಾಣದ ಸಮೀಪದ ಗಾಂಧಿಕಟ್ಟೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಕೇಂದ್ರದಲ್ಲಿ ನಾಲಾಯಕ್ ಸರಕಾರವು ಆಡಳಿತ ನಡೆಸುತ್ತಿದ್ದು, ಈ ಸರಕಾರವು ಬಂಡವಾಳಶಾಹಿಗಳನ್ನು ಬೆಳೆಸಲು ಬಡವರಿಗೆ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ಕೇಂದ್ರದ ಈ ನೀತಿಯು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಎಸ್‍ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಕೆ.ಎ.ಸಿದ್ದೀಕ್, ಎಸ್‍ಡಿಎಸಿಯು ಅಧ್ಯಕ್ಷ ಸಮೀರ್ ನಾಜೂಕ್ ಕೂರ್ನಡ್ಕ, ಎಸ್‍ಡಿಟಿಯು ಅಧ್ಯಕ್ಷ ಶಾಕಿರ್ ಅಳಕೆಮಜಲು, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *