Header Ads
Header Ads
Breaking News

ಪುತ್ತೂರಿನಲ್ಲಿ ಗುಜರಿ ಅಂಗಡಿಗೆ ಬೆಂಕಿ

ಶಾರ್ಟ್ ಸರ್ಕ್ಯೂಟ್‌ನಿಂದ ಗುಜರಿ ಅಂಗಡಿಯೊಂದಕ್ಕೆ ಬೆಂಕಿ ಅವಘಡ ಸಂಭವಿಸಿ ಸಂಪೂರ್ಣ ಹೊತ್ತಿ ಉರಿದ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.


ಪುತ್ತೂರಿನ ಬೊಳುವಾರಿನಲ್ಲಿರುವ ಅಮಾನ್ ಟ್ರೇಡರ್‍ಸ್ ಗುಜರಿ ಅಂಗಡಿ ಶಾರ್ಟ್ ಸರ್ಕ್ಯೂನಿಂದ ಬೆಂಕಿಗೆ ಆಹುತಿಯಾಗಿದೆ. ಅಂಗಡಿ ಪಕ್ಕದ ಮನೆಗಳ ವಿದ್ಯುತ್ ಸಂಪರ್ಕ ತಂತಿಗಳಿಗೆ ಆವರಿಸಿದ ಬೆಂಕಿಯಿಂದಾಗಿ ಈ ಅನಾಹುತ ಸಂಭವಿಸಿದೆ. ಈ ಅವಘಡದಿಂದ ಗುಜರಿ ಸಾಮಾಗ್ರಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು. ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಪ್ರವೀಣ್ ಪುತ್ತೂರು

Related posts

Leave a Reply