Header Ads
Breaking News

ಪುತ್ತೂರಿನಲ್ಲಿ ಜನಪ್ರತಿನಿಧಿ,ಇಲಾಖಾಧಿಕಾರಿಗಳೊಂದಿಗೆ ಮಕ್ಕಳ ಸಂವಾದ

ಪುತ್ತೂರು: ಉತ್ತಮ ಅವಕಾಶಗಳು ಸಿಕ್ಕಿದಾಗ ಸಮಾಜದಲ್ಲಿ ಮಕ್ಕಳು ಉತ್ತಮ ರೀತಿಯಲ್ಲಿ ಬೆಳದು ಮುಂದೆ ಉತ್ತಮ ಸಮಾಜವಂತರಾಗಲು ಸಾಧ್ಯವಿದೆ. ಮಕ್ಕಳಲ್ಲಿ ಪ್ರಶ್ನಿಸುವ ಪ್ರವೃತ್ತಿ ಹೆಚ್ಚಾಗಬೇಕು ಎಂದು ಪುತ್ತೂರು ತಾಪಂ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್ ಹೇಳಿದರು.

ಅವರು ದ.ಕ.ಜಿಲ್ಲಾ ಮಕ್ಕಳ ಮಾಸೋತ್ಸವದ ಅಂಗವಾಗಿ ಪುತ್ತೂರಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜನಪ್ರತಿನಿಧಿಗಳೊಂದಿಗೆ ಮತ್ತು ಇಲಾಖಾ ಅಧಿಕಾರಿಗಳೊಂದಿಗೆ ಮುಖಾಮುಖಿ ಮಕ್ಕಳ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ ಮಕ್ಕಳಿಗೆ ಅವರದೇ ಆಗಿರುವ ಹಕ್ಕುಗಳಿದ್ದು, ಅದನ್ನು ಸಮರ್ಪಕವಾಗಿ ದೊರಕಿಸಿಕೊಡುವಲ್ಲಿ ಎಲ್ಲರ ಪ್ರಯತ್ನಗಳಾಗಬೇಕು. ಇದಕ್ಕೆ ಮಕ್ಕಳ ಮಾಸೋತ್ಸವವು ಪ್ರೇರಣೆಯಾಗಲಿ ಎಂದರು.
ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನಯನ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ್, ಪತ್ರಕರ್ತ ಸಂಶುದ್ದೀನ್ ಸಂಪ್ಯ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *