Header Ads
Header Ads
Header Ads
Breaking News

ಪುತ್ತೂರಿನಲ್ಲಿ ಫೈನ್ ಮೆಡಿಕಲ್ಸ್ ಶುಭಾರಂಭ ಶಾಸಕಿ ಶಕುಂತಳಾ ಶೆಟ್ಟಿ ಉದ್ಘಾಟನೆ

ಔಷಧಿಗಳ ಮಾರಾಟ ಮಳಿಗೆ ಫೈನ್ ಮೆಡಿಕಲ್ಸ್ ಪುತ್ತೂರಿನ ಕೆ‌ಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಎ.ಎಂ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಪುತ್ತೂರಿನಲ್ಲಿ ಆರಂಭಗೊಂಡ ಫೈನ್ ಮೆಡಿಕಲ್ಸ್ ಮಳಿಗೆಯನ್ನು ಶಾಸಕಿ ಶಕುಂತಳಾ ಟಿ ಶೆಟ್ಟಿ ಉದ್ಘಾಟಿಸಿ, ಶುಭಹಾರೈಸಿದರು.

ಈ ವೇಳೆ ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಎಸ್.ಬಿ ಮುಹಮ್ಮದ್ ದಾರಿಮಿ ಮಾತನಾಡಿ, ವೈದ್ಯರು ದೇಶದ ಆಸ್ತಿ. ದೇಶದಲ್ಲಿ ತಂತ್ರಜ್ಞಾನಗಳು ಮುಂದುವರಿಯುತ್ತಿದೆ. ಆಸ್ಪತ್ರೆಗಳು, ಮೆಡಿಕಲ್‌ಗಳು ಹೆಚ್ಚಾದಂತೆ ಜನರಿಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಕೇಂದ್ರ ಜುಮ್ಮಾ ಮಸೀದಿಯ ಮುದ್ರಿಸ್ ಸೈಯ್ಯದ್ ಅಹ್ಮದ್ ಪೂಕೋಯ ತಂಙಳ್ ಆರ್ಶೀವಚನ ನೀಡಿದರು.ಈ ಸಂದರ್ಭ ಕೆಪಿಸಿಸಿ ಕಾರ್ಯದರ್ಶಿಯಾಗಿರುವ ಜಿ.ಪಂ ಸದಸ್ಯ ಎಂ.ಎಸ್ ಮಹಮ್ಮದ್, ಮದುಮೇಹ ತಜ್ಞ ಡಾ.ನಝೀರ್ ಅಹಮದ್, ಹೃದ್ರೋಗ ತಜ್ಞ ಡಾ.ಸುರೇಶ್ ಪುತ್ತೂರಾಯ ನಗರ ಸಭಾ ಸದಸ್ಯ ರಾಜೇಶ್ ಬನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಜೆಡಿ‌ಎಸ್ ರಾಜ್ಯ ಜಂಟಿ ಕಾರ್ಯದರ್ಶಿ ಇಬ್ರಾಹಿಂ ಗೋಳಿಕಟ್ಟೆ ಮಿನ್ಹಾ ಫ್ಯಾಬ್ರಿಕ್ ಶಾಪ್‌ನ ಮಾಲಕ ಮಹಮ್ಮದ್ ಕುಕ್ಕುವಳ್ಳಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ಮತ್ತಿತರು ಉಪಸ್ಥತಿರಿದ್ರು.

Related posts

Leave a Reply