Header Ads
Header Ads
Breaking News

ಪುತ್ತೂರಿನಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ-2018

ಮಕ್ಕಳು ತಮ್ಮ ಹಕ್ಕುಗಳ ಜತೆಗೆ ನಮ್ಮಂತೆ ಇರುವ ಇತರ ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಾರದಂತೆ ವರ್ತಿಸಬೇಕಾಗಿದೆ. ಎಲ್ಲಿಯಾದರು ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ದೂರು ನೀಡಿ ಎಂದು ಪಡಿ ಸಂಸ್ಥೆಯ ನಿರ್ದೇಶಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿ’ಸೋಜಾ ಹೇಳಿದರು.

ಅವರು ಸೋಮವಾರ ನೆಲ್ಲಿಕಟ್ಟೆ ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ-೨೦೧೮ನ್ನು ಉದ್ಘಾಟಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಮಕ್ಕಳ ಹಕ್ಕುಗಳ ಕುರಿತು ಸಂಬಂಧ ಪಟ್ಟ ಇಲಾಖೆಗಳು ಹಕ್ಕುಗಳ ಉಲ್ಲಂಘನೆಯಾದಾಗ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರಿತಿರಬೇಕು. ಈಗಾಗಲೇ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎರಡು ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳ ಮಾಸೋತ್ಸವ ನಡೆಯುತ್ತಿದ್ದು, ಎಲ್ಲಾ ಶಾಲೆಗಳ ಸಹಿತ ಸಂಬಂಧ ಪಟ್ಟ ಇಲಾಖೆಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂಬ ಸೂಚನೆಯನ್ನು ಹೊರಡಿಸಲಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ನಗರ ಠಾಣೆಯ ಎಎಸ್‌ಐ ಬೆಳ್ಳಿಯಪ್ಪ ಗೌಡ ಮಾತನಾಡಿ, ಮಕ್ಕಳು ದುಶ್ಚಟಗಳಿಗೆ ಒಮ್ಮೆ ಬಲಿಯಾದರೆ ಅದರಿಂದ ಹೊರಗೆ ಬರಲು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಯಾವುದೇ ದುಶ್ಚಟಗಳಿಗೆ, ಕಾನೂನುಬಾಹಿರ ಚಟುವಟಿಕೆಗಳಿಗೆ ಬಲಿಯಾಗದೆ ಸ್ಪಷ್ಟ ಗುರಿಯಿಂದ ಮುನ್ನಡೆಯಿರಿ. ಈ ಮೂಲಕ ಸಮಾಜದಲ್ಲಿ ಗುರುತಿಸುವ ವ್ಯಕ್ತಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವೇದಿಕೆಯಲ್ಲಿ ಒಡಿಯೂರು ವಜ್ರಮಾತಾ ಮಹಿಳಾ ಪುತ್ತೂರು ಘಟಕದ ಅಧ್ಯಕ್ಷೆ, ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನಯನಾ ರೈ. ವತ್ಸಲಾ ನಾಯಕ್, ಮಮತಾ, ಪೆಡ್ರಿಕ್ ಲೋಬೋ, ಸಾಹಿರಾ ಜುಬೈರ್, ಸುಮಂಗಲಾ ಶೆಣೈ, ಪದ್ಮಾವತಿ, ರಾಜೇಶ್ವರಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ ವತ್ಸಲಾ ನಾಯಕ್, ನ್ಯಾಯವಾದಿ ಹರಿಣಾಕ್ಷಿ ಜೆ.ಶೆಟ್ಟಿ ,ಡಾ.ಶಿವರಾಮ ಕಾರಂತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ, ಮಕ್ಕಳ ಮಾಸೋತ್ಸವ ಸಂಚಾಲಕಿ ರೋಹಿಣಿ ರಾಘವ ಆಚಾರ್ಯ ಉಪಸ್ಥಿತರಿದ್ದರು. ಬಳಿಕ ಮಕ್ಕಳ ಹಕ್ಕುಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲಾಯಿತು.

Related posts

Leave a Reply