Header Ads
Breaking News

ಪುತ್ತೂರಿನಲ್ಲಿ ಮಹಿಳಾ ದಿನಾಚರಣೆ

ಸಂಕಷ್ಟಕ್ಕೊಳಗಾಗುವ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಇಲಾಖೆ ಇದೆ. ಆದರೆ ಸಮಾಜವೂ ಇದರೊಂದಿಗೆ ಕೈಜೋಡಿಸಬೇಕು. ಮಹಿಳೆ ಮತ್ತು ಮಕ್ಕಳು ಸದೃಢವಾದರೆ ಮಾತ್ರ ಸಮಾಜ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ. ಈ ಕುರಿತು ಮಹಿಳೆಯರು ಜಾಗೃತರಾಗಬೇಕು ಎಂದು ಪುತ್ತೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀಲತಾ ಹೇಳಿದರು.

ಪುತ್ತೂರು ನಗರಸಭಾ ಸಮುದಾಯಭವನದಲ್ಲಿ ಪುತ್ತೂರು ನಗರಸಭಾ ಮತ್ತು ಡೇ ನಲ್ಮ್ ಯೋಜನೆಯಡಿ ನಡೆದ ಮಹಿಳಾ ದಿನಾಚರಣೆಯನ್ನು ಅವರು ಉದ್ಘಾಟಿಸಿದರು. ಮಹಿಳೆಯರು ತಾವು ಮತ್ತು ತಮ್ಮ ಮಕ್ಕಳ ಹಕ್ಕುಗಳ ಕುರಿತು ಅರಿವು ಹೊಂದಬೇಕು. ಕೌಟುಂಬಿಕ ಸಮಸ್ಯೆಗಳು ಉಂಟಾದಾಗ ನೇರವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂರ್ಪಕಿಸಬೇಕು. ತಮ್ಮ ಹಕ್ಕುಗಳನ್ನು ಕಾನೂನಿನ ಮೂಲಕ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.ವೇದಿಕೆಯಲ್ಲಿ ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ, ಪುತ್ತೂರು ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಗೌರಿ ಬನ್ನೂರು, ನಗರಸಭಾ ಪರಿಸರ ಎಂಜಿನಿಯರ್ ಗುರುಪ್ರಸಾದ್ ಶೆಟ್ಟಿ, ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಮುನಾ, ಕಂದಾಯ ಅಧಿಕಾರಿ ರಾಧಾಕೃಷ್ಣ ಉಪಸ್ಥಿತರಿದ್ದರು. ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

Leave a Reply

Your email address will not be published. Required fields are marked *