Header Ads
Breaking News

ಪುತ್ತೂರಿನಲ್ಲಿ ಲೋಕೋಪಯೋಗಿ ಇಲಾಖೆ ಕಟ್ಟಡ ಉದ್ಘಾಟನೆ

ಪುತ್ತೂರು : ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಸಂದರ್ಭದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದ್ದು, sಸಾರ್ವಜನಿಕ ಕೆಲಸ ಕಾರ್ಯಗಳನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ಕಾಮಗಾರಿ ಗುಣಮಟ್ಟದ ವಿಚಾರದಲ್ಲಿ ಎಚ್ಚರ ವಹಿಸಬೇಕು. ಸಾರ್ವಜನಿಕ ಹಣ ಪೋಲಾಗದಂತೆ ಜಾಗೃತರಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚಿಸಿದರು.


ಪುತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಲೋಕೋಪಯೋಗಿ ಇಲಾಖಾ ಕಟ್ಟಡವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು. ಈ ಕಟ್ಟಡ ಕಾಮಗಾರಿ ಗುಣಮಟ್ಟ ವಿಚಾರದಲ್ಲಿ ಮಾಧ್ಯಮಗಳಲ್ಲಿ ಚರ್ಚೆಯಾಗಿರುವುದನ್ನು ಉಲ್ಲೇಖಿಸಿದ ಅವರು ಇಂದು ಪತ್ರಿಕೆಗಳು, ಮಾಧ್ಯಮಗಳು ಸಾರ್ವಜನಿಕ ಕಾಮಗಾರಿಗಳ ವಿಚಾರದಲ್ಲಿ ಹದ್ದಿನ ಕಣ್ಣಿಟ್ಟಿವೆ. ಇಂತಹ ಸಂದರ್ಭದಲ್ಲಿ ತಾವು ನಿರ್ವಹಿಸುವ ಕಾಮಗಾರಿಗಳು ಹತ್ತಾರು ವರ್ಷಗಳ ಕಾಲ ಜನತೆಗೆ ಸದ್ವಿನಿಯೋಗವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಇಲಾಖೆಯ ಅಧಿಕಾರಿಗಳ ಮೇಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭವಾನಿ ಚಿದಾನಂದ, ಪುರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಸ್ಥಳೀಯ ನಗರಸಭಾ ಸದಸ್ಯೆ ಶ್ಯಾಮಲಾ ವಸಂತ್, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಅವರನ್ನು ಸನ್ಮಾನಿಸಲಾಯಿತು.
ವರದಿ: ಅನೀಶ್ ಪುತ್ತೂರು

 

Related posts

Leave a Reply