Header Ads
Breaking News

ಪುತ್ತೂರಿನಲ್ಲಿ ಸಿಫುಡ್ ಪಾರ್ಕ್ ನಿರ್ಮಾಣಕ್ಕೆ ಯಾವುದೇ ವಿರೋಧವಿಲ್ಲ -ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿಕೆ

ಪುತ್ತೂರಿನಲ್ಲಿ ಸಿ ಫುಡ್ ಪಾರ್ಕ್ ನಿರ್ಮಾಣಕ್ಕೆ ನಮ್ಮಿಂದ ಯಾವುದೇ ವಿರೋಧವಿಲ್ಲ ವಿನಃ ಸರಕಾರಿ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಈ ಉದ್ದಿಮೆ ಸ್ಥಾಪನೆಗೆ ನಮ್ಮ ವಿರೋಧವಿದೆ ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ.

ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾನು ಶಾಸಕಿಯಾಗಿದ್ದ ಸಂದರ್ಭ ಬನ್ನೂರಿನಲ್ಲಿ 40 ಎಕ್ರೆ ಜಾಗವನ್ನು ಗುರುತಿಸಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಮೀಸಲಿಟ್ಟಿದ್ದೇನೆ. ಆದರೆ ಇದೀಗ ಈ ಜಾಗವನ್ನು ಬೇರೆ ಉದ್ದಿಮೆಗೆ ಬಳಸುವುದರ ಒಳಗಿನ ಗುಟ್ಟೇನು ಎಂದು ಪ್ರಶ್ನಿಸಿದ ಅವರು, ತಮ್ಮದೇ ಪಕ್ಷದ ಸರಕಾರ, ಶಾಸಕರು, ಸಂಸದರು ಇರುವಾಗಿ ಸಿ ಫುಡ್ ಪಾರ್ಕ್ ನಿರ್ಮಾಣಕ್ಕೆ ಜಾಗ ಹುಡುಕುವ ಪ್ರಯತ್ನ ಮಾಡದೇ ಇದ್ದ ಜಾಗವನ್ನು ಬಳಸುವ ಮೂಲಕ ತಪ್ಪು ಮಾಡಿದ್ದಾರೆ ಎಂದರು.
ಈಗಾಗಲೇ ಉಪ್ಪಿನಂಗಡಿಗೆ ಕಾಲೇಜೊಂದನ್ನು ರಾಮ್‌ಭಟ್ ನೀಡಿದ್ದಾರೆ. ಪುತ್ತೂರಿನಲ್ಲಿ ಮೊರಾರ್ಜಿ ದೇಸಾಯಿ ಶಾಲೆ, ಏಳು ಹಾಸ್ಟೇಲ್, ಕಾಲೇಜುಗಳನ್ನು ಪುತ್ತೂರಿಗೆ ತರುವ ಮೂಲಕ ಕ್ಷೇತ್ರಕ್ಕೆ ಬೇಕಾದ ಎಲ್ಲಾ ಅಭಿವೃದ್ಧಿ ಕೆಲಸಕ್ಕೆ ಆದ್ಯತೆ ನೀಡಿದ್ದೇನೆ. ಆದರೆ ಈಗಿನ ಶಾಸಕರು ನಾನು ಮಾಡಿದ್ದ ಅಭಿವೃದ್ಧಿ ಕೆಲಸದಲ್ಲಿ ಟೇಪು ಕತ್ತರಿಸುವ ಕೆಲಸವನ್ನಷ್ಟೇ ಮಾಡಿದ್ದಾರೆ ಎಂದು ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದಿರುವ ನನ್ನಿಂದ ಮೆಡಿಕಲ್ ಕಾಲೇಜು ಯಾಕೆ ಮಾಡಲಾಗಿಲ್ಲ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *